ಮಡಿಕೇರಿ, ಡಿ. 8: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಆಗಿ ಪ್ರಸ್ತುತ ಕೃಷಿ ಇಲಾಖೆಯ ತಾಂತ್ರಿಕ ಅಧಿಕಾರಿಯಾಗಿರುವ ಅಜ್ಜಿಕುಟ್ಟೀರ ಗಿರೀಶ್ ಅವರನ್ನು ಸರಕಾರ ಹೆಚ್ಚುವರಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ. ಮಡಿಕೇರಿ ತಾಲೂಕಿನ ಕೃಷಿ ಇಲಾಖೆಯಲ್ಲಿ ತಾಂತ್ರಿಕ ಅಧಿಕಾರಿಯಾಗಿಯೂ ಕಾರ್ಯನಿರ್ವಹಿಸುತ್ತಿರುವ ಗಿರೀಶ್ ಇದೀಗ ಹೆಚ್ಚುವರಿಯಾಗಿ ಈ ಜವಾಬ್ದಾರಿಯನ್ನು ಹೊಂದಿದ್ದು, ಈಗಾಗಲೇ ಅಧಿಕಾರ ಸ್ವೀಕರಿಸಿದ್ದಾರೆ.