ಮಡಿಕೇರಿ, ಡಿ. 8: ಇಲ್ಲಿನ ಲಿಟ್ಲ್ ಫ್ಲವರ್ ವಿದ್ಯಾಸಂಸ್ಥೆಯಲ್ಲಿ ತಾ. 7 ರಂದು ಮಕ್ಕಳ ಪ್ರತಿಭೆಯನ್ನು ಗುರುತಿಸುವ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಚ್ಚಾಡೋ ವಹಿಸಿದರು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಚೇತನ್ ಹಾಗೂ ತೀರ್ಪುಗಾರರಾಗಿ ಅನಿತಾ ಪೂವಯ್ಯ ಮತ್ತು ರೇಣುಕಾ ಸುಧಾಕರ್ ಪಾಲ್ಗೊಂಡಿದ್ದರು. ಶಾಲಾ ಮುಖ್ಯ ಶಿಕ್ಷಕಿ ಸುನಿತಾ ಹಾಗೂ ಶಾಲಾ ಕಾರ್ಯದರ್ಶಿ ಪ್ರೀತು, ಆಡಳಿತ ಮಂಡಳಿಯ ಸದಸ್ಯರಾದ ಉಮೇಶ್ ಸುಬ್ರಮಣಿ, ದರ್ಶನ್, ಗುಲಾಬಿ ಜನಾರ್ಧನ್ ಉಪಸ್ಥಿತರಿದ್ದರು.
ಪ್ರಾರ್ಥನೆಯನ್ನು ವಿದ್ಯಾರ್ಥಿನಿ ವಿನಿಷಾ ತಂಡ ನಿರ್ವಹಿಸಿತು. ಗಣ್ಯರು ದೀಪ ಬೆಳಗುವದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಕುಮಾರಿ ಶೋಭಾ ಸ್ವಾಗತಿಸಿದರು.
ವಿದ್ಯಾರ್ಥಿಗಳಿಗೆ ಛದ್ಮವೇಷ ಸ್ಪರ್ಧೆ, ನೃತ್ಯ ಕಾರ್ಯಕ್ರಮ ಜರುಗಿತು. ಬಹುಮಾನವನ್ನು ವಿತರಿಸಲಾಯಿತು. ವಿದ್ಯಾರ್ಥಿಗಳಿಗೆ ಸಹಿ ವಿತರಿಸುವದರ ಮೂಲಕ ಕಾರ್ಯಕ್ರಮ ಮುಕ್ತಾಯಗೊಂಡಿತು. ವಿದ್ಯಾರ್ಥಿನಿ ಪ್ರತೀಶ ವಂದಿಸಿದಳು.