ಒಡೆಯನಪುರ, ಡಿ. 8: ಕರ್ನಾಟಕ ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆ (ಕ್ಯಾಮ್ಸ್) ವತಿಯಿಂದ ಬೆಂಗಳೂರು ಫ್ರೀಡಂ ಪಾರ್ಕ್‍ನಲ್ಲಿ ನಡೆದ ಕರ್ನಾಟಕ ವೈಭವ ಕಾರ್ಯಕ್ರಮದಲ್ಲಿ ಖಾಸಗಿ ಶಾಲಾ ಶಿಕ್ಷಕರಿಗಾಗಿ ಹಮ್ಮಿಕೊಂಡಿದ್ದ ಕನ್ನಡ ಪರೀಕ್ಷೆಯಲ್ಲಿ ಶನಿವಾರಸಂತೆ ಸುಪ್ರಜ ಗುರುಕುಲ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಹೆಚ್.ಕೆ. ಕೆಂಚಮ್ಮ 4ನೇ ಸ್ಥಾನ ಪಡೆದುಕೊಂಡರು.

ಈ ಸಂದರ್ಭ ಅವರನ್ನು ಕಾರ್ಯಕ್ರಮ ಆಯೋಜಕರು ಪ್ರಶಸ್ತಿ ನೀಡಿ ಗೌರವಿಸಿದರು. ಹಾಸನ ಜಿಲ್ಲೆಯ ಆಲೂರು ತಾಲೂಕಿನ ಕೆಂಚಮ್ಮ ಎಂ,ಎ ಡಿಇಡಿ ಪದವೀಧರೆಯಾಗಿದ್ದು, ಕಳೆದ 7 ವರ್ಷಗಳಿಂದ ಸುಪ್ರಜ ಗುರುಕುಲ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.