ಶನಿವಾರಸಂತೆ, ಡಿ. 8: ಪಟ್ಟಣದ ಶ್ರೀರಾಮಮಂದಿರದಲ್ಲಿ ಸೇವಾ ಸಮಿತಿ ವತಿಯಿಂದ ತಾ.9ರಂದು (ಇಂದು) ಹನುಮ ಜಯಂತಿ ಆಚರಿಸಲಾಗುವದು.

ಸಂಜೆ 4ರಿಂದ ಪೂಜಾ ಕೈಂಕರ್ಯಗಳು ಆರಂಭವಾಗುವದು. ಶ್ರೀಮಹಾಗಣಪತಿ, ಆದಿತ್ಯಾದಿ ನವಗ್ರಹ, ಸೀತಾ, ಲಕ್ಷ್ಮಣ, ಆಂಜನೇಯ ಸಹಿತ ಶ್ರೀರಾಮಚಂದ್ರ ಸ್ವಾಮಿಗೆ ಪಂಚಾಮೃತಾಭಿಷೇಕ, ಪುರುಷ ಸೂಕ್ತ, ನಾರಾಯಣ ಸೂಕ್ತ, ಶ್ರೀಸೂಕ್ತ, ಜಲಾಭಿಷೇಕ ಅಲಂಕಾರ ಸೇವೆ ನೆರವೇರಲಿದೆ.

ಸಂಜೆ 5ರಿಂದ ಶ್ರೀಮಹಾಗಣಪತಿ ಹೋಮ, ನವಗ್ರಹ ಹೋಮ, ಶ್ರೀರಾಮ ತಾರಕ ಹೋಮ, ಶ್ರೀ ಆಂಜನೇಯ ಸ್ವಾಮಿಗೆ ಫಲ ಹೋಮ ನಡೆಯಲಿದೆ. 7 ಗಂಟೆಗೆ ಪೂರ್ಣಾಹುತಿ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಹಾಗೂ ಅನ್ನ ಸಂತರ್ಪಣೆ ಏರ್ಪಡಿಸಲಾಗಿದೆ ಎಂದು ಸಮಿತಿ ಪ್ರಕಟಣೆ ತಿಳಿಸಿದೆ.