ಬೆಂಗಳೂರು, ಡಿ.9: ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯದ ಆಡಳಿತಾರೂಢ ಬಿಜೆಪಿ ಸರ್ಕಾರದ ಅಸ್ತಿತ್ವವನ್ನು ಮತ್ತು ಅನರ್ಹ ಶಾಸಕರ ಭವಿಷ್ಯವನ್ನು ನಿರ್ಧರಿಸಬಲ್ಲ ಚುನಾವಣೆ ಎಂದೇ ಹೇಳಲಾಗುತ್ತಿದ್ದ ಉಪಚುನಾವಣಾ ಫಲಿತಾಂಶ ಹೊರಬಿದ್ದಿದ್ದು, 15 ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಆಡಳಿತಾರೂಢ ಬಿಜೆಪಿ ಸರ್ಕಾರ ಸುಭದ್ರಗೊಂಡಿದೆ. ಕಾಂಗ್ರೆಸ್ 2 ಸ್ಥಾನಗಳಿಗೆ ಸೀಮಿತಗೊಂಡಿದ್ದು, ಜೆಡಿಎಸ್ ಒಂದೂ ಸ್ಥಾನವನ್ನು ಗಳಿಸಿಲ್ಲ. ಓರ್ವ ಪಕ್ಷೇತರ ಆಯ್ಕೆ ಯಾಗಿದ್ದಾರೆ. ವಿವರ ಈ ಕೆಳಗಿನಂತಿದೆ ಹಿರೇಕೂರಿನಲಿ ಬಿಜೆಪಿಯ ಬಿಸಿ ಪಾಟೀಲ್ (85562) ಕಾಂಗ್ರೆಸ್ ಅಭ್ಯರ್ಥಿ ಬಿ.ಹೆ. ಬನ್ನಿಕೋಡ್ (56495) ವಿರುದ್ಧ 29067 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಯಲ್ಲಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಮ್ ಹೆಬ್ಬಾರ್ (80442) ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ
(ಮೊದಲ ಪುಟದಿಂದ) ನಾಯಕ್(49034) ವಿರುದ್ಧ 31408 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ರಾಣೆಬೆನ್ನೂರಿನಲ್ಲಿ ಬಿಜೆಪಿಯ ಅರುಣ್ ಕುಮಾರ್ (95438) ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಕೋಳಿವಾಡ (72216)À ವಿರುದ್ಧ 23222 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನ ಹಲಗೇರಿ ಮೂರನೇ ಸ್ಥಾನಕ್ಕೆ ಇಳಿದಿದ್ದಾರೆ.
ವಿಜಯನಗರದಲ್ಲಿ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್(85477) ಕಾಂಗ್ರೆಸ್ ಅಭ್ಯರ್ಥಿ ವಿ.ವೈ. ಘೋರ್ಪಡೆ (55352) ವಿರುದ್ಧ 30125 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ಎನ್.ಎಂ.ನಬಿ ಮೂರನೇ ಸ್ಥಾನಕ್ಕೆ ಇಳಿದಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ (84389) ಕಾಂಗ್ರೆಸ್ ಅಭ್ಯರ್ಥಿ ಎಂ.ಅಂಜನಪ್ಪ (49588) ವಿರುದ್ಧ 34801 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಕೆ.ಆರ್.ಪುರದಲ್ಲಿ ಬಿಜೆಪಿ ಅಭ್ಯರ್ಥಿ ಭೈರತಿ ಬಸವರಾಜು (128946) ಕಾಂಗ್ರೆಸ್ ಅಭ್ಯರ್ಥಿ ಎಂ.ನಾರಾಯಣ ಸ್ವಾಮಿ (66126) ವಿರುದ್ಧ 62820 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಮಹಾಲಕ್ಷ್ಮೀ ಲೇಔಟ್ನಲ್ಲಿ ಬಿಜೆಪಿ ಅಭ್ಯರ್ಥಿ ಗೋಪಾಲಯ್ಯ (85889) ಕಾಂಗ್ರೆಸ್ ಅಭ್ಯರ್ಥಿ ಎಂ.ಶಿವರಾಜು (31503) ವಿರುದ್ಧ 54386 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ಕಾಂತರಾಜು ಮೂರನೇ ಸ್ಥಾನ ಪಡೆದಿದ್ದಾರೆ.
ಗೋಕಾಕ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ (87450) ಕಾಂಗ್ರೆಸ್ ಅಭ್ಯರ್ಥಿ ಲಖನ್ ಜಾರಕಿಹೊಳಿ (58444) ವಿರುದ್ಧ 29006 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ಅಶೋಕ್ ಪೂಜಾರಿ ಮೂರನೇ ಸ್ಥಾನ ಹೊಂದಿದ್ದಾರೆ.
ಕಾಗವಾಡ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ (76952) ಕಾಂಗ್ರೆಸ್ ಅಭ್ಯರ್ಥಿ ಭರಮಗೌಡ ಕಾಗೆ (58395) ವಿರುದ್ಧ 18557 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಕೆ.ಆರ್. ಪೇಟೆಯಲ್ಲಿ ಬಿಜೆಪಿ ಅಭ್ಯರ್ಥಿ ನಾರಾಯಣ ಗೌಡ (66094) ಜೆಡಿಎಸ್ ಅಭ್ಯರ್ಥಿ ದೇವರಾಜ್ ಬಿಎಲ್(56363) ವಿರುದ್ಧ 9731 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಅಥಣಿ ಕ್ಷೇತ್ರದಲ್ಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ (99203)ಕಾಂಗ್ರೆಸ್ ಅಭ್ಯರ್ಥಿ ಜಿ.ಬಿ.ಮಂಗ್ಸೂಳಿ(59214) ವಿರುದ್ಧ 39989 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಯಶವಂತಪುರದಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ಟಿ. ಸೋಮಶೇಖರ್ (144722) ಜೆಡಿಎಸ್ ಅಭ್ಯರ್ಥಿ ಟಿ.ಎನ್. ಜವರಾಯಿಗೌಡ (117023) 27699 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಶಿವಾಜಿನಗರದಲ್ಲಿ ಕಾಂಗ್ರೆಸ್ನ ರಿಜ್ವಾನ್ ಅರ್ಷದ್(49890) ಬಿಜೆಪಿಯ ಎಂ ಸರವಣ (36369) ಅವರನ್ನು 13521 ಮತಗಳ ಅಂತರದಿಂದ ಪರಾಭವ ಗೊಳಿಸಿದ್ದಾರೆ.
ಹುಣಸೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಚ್.ಪಿ. ಮಂಜುನಾಥ್ (92725) ಬಿಜೆಪಿಯ ಅಡಗೂರು ವಿಶ್ವನಾಥ್ (52998) ಅವರನ್ನು 39727 ಮತಗಳ ಅಂತರದಿಂದ ಪರಾಭವಗೊಳಿಸಿದ್ದಾರೆ
ಇನ್ನು ಹೊಸಕೋಟೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ
ಸ್ಪರ್ಧಿಸಿದ್ದ ಶರತ್ ಬಚ್ಚೇಗೌಡ (81671) ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ (70185) ಅವರನ್ನು 11486 ಮತಗಳ ಅಂತರದಿಂದ ಪರಾಭವಗೊಳಿಸಿದ್ದಾರೆ.