ಮೂರ್ನಾಡು, ಡಿ. 9 : ಕೊಡಗು ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕೊಡಗು ಜಿಲ್ಲಾ ವೃತ್ತಿ ಶಿಕ್ಷಣ ಶಿಕ್ಷಕರ ಸಂಘದ ವತಿಯಿಂದ ಮಡಿಕೇರಿಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಈಚೆಗೆ ನಡೆದ ಜಿಲ್ಲಾ ಮಟ್ಟದ ಶೈಕ್ಷಣಿಕ ಹಾಗೂ ಮಕ್ಕಳ ವೃತ್ತಿ ಶಿಕ್ಷಣ ಕಲಿಕೋತ್ಸವದ ವಸ್ತು ಪ್ರದರ್ಶನದಲ್ಲಿ ಸಮೀಪದ ಪಾರಾಣೆ ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. ಶಾಲೆಯ ವೃತ್ತಿ ಶಿಕ್ಷಣ ಶಿಕ್ಷಕರಾದ ಹೆಚ್.ಎಲ್ ಭೈರ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ವಸ್ತು ಪ್ರದರ್ಶನದಲ್ಲಿ ಪಾಲ್ಗೊಂಡಿದ್ದರು.