ಮಡಿಕೇರಿ, ಡಿ. 13: ಶನಿವಾರಸಂತೆಯ ಸುಪ್ರಜ ಗುರುಕುಲ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾ. 14 ರಂದು ಬೆಳಿಗ್ಗೆ 11 ರಿಂದ ಸಂಜೆ 4 ಗಂಟೆಯವರೆಗೆ 5 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಂದ ವಿಜ್ಞಾನ ವಸ್ತುಪ್ರದರ್ಶನ ಹಾಗೂ ಸ್ಪರ್ಧೆ ಶಾಲಾ ಆವರಣದಲ್ಲಿ ಏರ್ಪಡಿಸಲಾಗಿದೆ. ವಿವಿಧ ಶಾಲೆಯ ವಿದ್ಯಾರ್ಥಿಗಳು ಹಾಗೂ ಪೋಷಕರಿಗೂ ವೀಕ್ಷಣೆಗೆ ಮುಕ್ತ ಅವಕಾಶವಿರುತ್ತದೆ ಎಂದು ಶಾಲೆಯ ಪ್ರಕಟಣೆ ತಿಳಿಸಿದೆ.