ಮಡಿಕೇರಿ, ಡಿ. 13: ಕಾನೂನು ಮಾಪನ ಶಾಸ್ತ್ರ ಇಲಾಖೆ, ಮಡಿಕೇರಿ ಇವರ ವತಿಯಿಂದ ತಾತ್ಕಾಲಿಕ ಸತ್ಯಾಪನೆ ಮುದ್ರೆ ಶಿಬಿರವನ್ನು ತಾ. 14 ರಿಂದ 24 ರವರೆಗೆ ಶನಿವಾರಸಂತೆ ಮುಖ್ಯ ರಸ್ತೆಯಲ್ಲಿರುವ ಮಹಿಳಾ ಸಮಾಜ, ಶಿಶು ವಿಹಾರದಲ್ಲಿ ಏರ್ಪಡಿಸಲಾಗಿದೆ. ಸಾರ್ವಜನಿಕರು ತಮ್ಮಲ್ಲಿ ಉಪಯೋಗಿಸುವ ಅಳತೆ, ತೂಕ ಮತ್ತು ತೂಕದ ಸಾಧನಗಳನ್ನು ಹಾಜರುಪಡಿಸಿ ಸತ್ಯಾಪನೆ ಮುದ್ರೆ ಮಾಡಿಸಲು ತಿಳಿಸಲಾಗಿದೆ.