ಮಡಿಕೇರಿ, ಡಿ. 13: ಬಿರುನಾಣಿ ಗ್ರಾ.ಪಂ. ವ್ಯಾಪ್ತಿಯ ಗ್ರಾಮಗಳನ್ನು ಒಳಗೊಂಡಿರುವ ಮರೆನಾಡು ಕೊಡವ ಸಮಾಜದ ವತಿಯಿಂದ ತಾ. 16ರಂದು ಮರೆನಾಡ್ ಪುತ್ತರಿ ಕೋಲ್‍ಮಂದ್ ಕಾರ್ಯಕ್ರಮ ಜರುಗಲಿದೆ. ಅಂದು ಅಪರಾಹ್ನ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷೆ ಅಮ್ಮಾಟಂಡ ಪಾರ್ವತಿ ಅಪ್ಪಯ್ಯ ಅವರು ಪಾಲ್ಗೊಳ್ಳಲಿದ್ದಾರೆ. ಸಮಾಜದ ಅಧ್ಯಕ್ಚ ಮಲ್ಲೇಂಗಡ ಎಂ. ಪೆಮ್ಮಯ್ಯ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರುಗಲಿದೆ.