ಮಡಿಕೇರಿ, ಡಿ. 13: ಮೂರ್ನಾಡು ಗೌಡ ಸಮಾಜದ 2015-16, 17, 18ನೇ ಸಾಲುಗಳ ವಾರ್ಷಿಕ ಮಹಾಸಭೆ ತಾ. 15 ರಂದು ಬೆಳಿಗ್ಗೆ 10 ಗಂಟೆಗೆ ಸಮಾಜದ ಅಧ್ಯಕ್ಷ ಸಿ.ಟಿ. ಕಾರ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ಸಮಾಜದ ಸಭಾಂಗಣದಲ್ಲಿ ನಡೆಯಲಿದೆ. ಇದೇ ಸಂದರ್ಭ ಸಮಾಜದ ಆಡಳಿತ ಮಂಡಳಿಗೆ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಸಮಾಜದ ಕಾರ್ಯದರ್ಶಿ ಬೈಲೋಳಿ ವಿಶ್ವನಾಥ್ ತಿಳಿಸಿದ್ದಾರೆ.