ಗೋಣಿಕೊಪ್ಪ ವರದಿ, ಡಿ. 13: ಭಾರತೀಯ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆಯು ಇಲ್ಲಿನ ಕಾವೇರಿ ಪದವಿ ಕಾಲೇಜು ಮತ್ತು ರೆಡ್ ರಿಬ್ಬನ್ ಕ್ಲಬ್‍ಗೆ ರಾಷ್ಟ್ರ ಪ್ರಶಸ್ತಿ ನೀಡಿದೆ.
ಬಳ್ಳಾರಿಯಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆಯ ಸಮಾವೇಶದಲ್ಲಿ ಶಾಸಕ ಸೋಮಶೇಖರ್ ರೆಡ್ಡಿ ಅವರಿಂದ ಎನ್‍ಎಸ್‍ಎಸ್ ಯೋಜನಾಧಿಕಾರಿ ವನಿತ್‍ಕುಮಾರ್ ಸ್ವೀಕರಿಸಿದರು.
ಎನ್.ಎಸ್.ಎಸ್ ಘಟಕದ ಸಹಯೋಗದಲ್ಲಿ ನಡೆಸಲಾಗುವ ರಕ್ತದಾನ, ಏಡ್ಸ್ ಜಾಗೃತಿ, ಗ್ರಾಮೀಣ ಶಿಬಿರದಲ್ಲಿ ಜಾಗೃತಿ, ಪೋಷಕರಿಗೆ ಜಾಗೃತಿ, ವಿದ್ಯಾರ್ಥಿಗಳಿಗೆ ಜಾಗೃತಿ, ಬೀದಿ ನಾಟಕ ಕಾರ್ಯ ಚಟುವಟಿಕೆಯನ್ನು ಗುರುತಿಸಿ ಪ್ರಶಸ್ತಿ ನೀಡಲಾಗಿದೆ.
ಕಾವೇರಿ ಕಾಲೇಜು ಎನ್.ಎಸ್.ಎಸ್. ಮತ್ತು ರೆಡ್ ರಿಬ್ಬನ್ ಕ್ಲಬ್ ಸಂಚಾಲಕರಾಗಿ ಮಂದೆಯಂಡ ವನಿತ್‍ಕುಮಾರ್ ಮತ್ತು ಮಚ್ಚಮಡ ರೀತಾ ಕಾರ್ಯನಿರ್ವಹಿಸುತ್ತಿದ್ದಾರೆ.