ಮಡಿಕೇರಿ, ಡಿ. 13: ಮಂಗಳೂರು ವಿಶ್ವವಿದ್ಯಾನಿಲಯ, ರಾಷ್ಟ್ರೀಯ ಸೇವಾ ಯೋಜನೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ವಾರ್ಷಿಕ ವಿಶೇಷ ಶಿಬಿರವು ತಾ. 20 ರಿಂದ 26 ರವರೆಗೆ ಬೋಯಿಕೇರಿ ಇಬ್ನಿವಳವಾಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.

ತಾ. 20 ರಂದು ಮಧ್ಯಾಹ್ನ 2.30 ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ, ಕಾರ್ಯಕ್ರಮದಲ್ಲಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಜವರಪ್ಪ ಡಿ.ಜೆ, ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿ ಟಿ.ಎನ್, ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ತಾ.ಪಂ. ಅಧ್ಯಕ್ಷೆ ತೆಕ್ಕಡೆ ಶೋಭ ಮೋಹನ್, ತಾ.ಪಂ. ಸದಸ್ಯರಾದ ಅಪ್ರು ರವೀಂದ್ರ, ಗ್ರಾ.ಪಂ. ಅಧ್ಯಕ್ಷ ಮಾದೇಟಿರ ತಿಮ್ಮಯ್ಯ, ಕಡಗದಾಳು ಗ್ರಾ.ಪಂ. ಸದಸ್ಯರಾದ ಸರಸ್ವತಿ ರವಿಕುಮಾರ್, ಸುಂದರಿ, ಬೋಯಿಕೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ರಾಜು ಹೆಚ್.ಆರ್. ಇತರರು ಪಾಲ್ಗೊಳ್ಳಲಿದ್ದಾರೆ.

ತಾ. 26 ರಂದು ಬೆಳಿಗ್ಗೆ 11.30 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ಸಮಾರಂಭದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ಸಹಾಯಕ ಪ್ರಾಧ್ಯಾಪಕ ಕೆ.ಸಿ. ದಯಾನಂದ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಜವರಪ್ಪ ಡಿ.ಜೆ., ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸದಸ್ಯ ಕಾರ್ಯದರ್ಶಿ ನೂರುನ್ನೀಸಾ, ನಿವೃತ ಮುಖ್ಯ ಶಿಕ್ಷಕಿ ಸರೋಜ ಹೆಚ್.ಕೆ. ಇತರರು ಪಾಲ್ಗೊಳ್ಳಲಿದ್ದಾರೆ.