ಡಿ. 14: ಭಾರತ ದೇಶದ ಅರ್ಧದಷ್ಟು ಆದಾಯವು ಅಸಂಘಟಿತ ವಲಯದ 42 ಕೋಟಿ ಕಾರ್ಮಿಕರಿಂದ ಉತ್ಪಾದನೆಯಾಗುತ್ತಿದೆ. ದೈನಂದಿನ ಜೀವನದಲ್ಲಿ ಗೃಹ ಆಧಾರಿತ ಕಾರ್ಮಿಕರು, ಬೀದಿಬದಿ ವ್ಯಾಪಾರಿಗಳು, ಬಿಸಿ ಊಟ ಸಿದ್ಧ ಪಡಿಸುವವರು, ಹಮಾಲಿಗಳು, ಇಟ್ಟಿಗೆ ಭಟ್ಟಿ ಕಾರ್ಮಿಕರು, ಚಮ್ಮಾರರು, ಚಿಂದಿ ಆಯುವವರು, ಮನೆ ಕೆಲಸದವರು, ರಿಕ್ಷಾ ಚಾಲಕರು, ಭೂರಹಿತ ಕಾರ್ಮಿಕರು, ಸ್ವಯಂ ಉದ್ಯೋಗಿಗಳು, ಕೃಷಿ ಕಾರ್ಮಿಕರು, ಕಟ್ಟಡ ಕಾರ್ಮಿಕರು, ಬೀಡಿ ಕಾರ್ಮಿಕರು, ಕೈಮಗ್ಗ ಕಾರ್ಮಿಕರು, ಚರ್ಮೋದ್ಯಮದ ಕಾರ್ಮಿಕರು, ಧ್ವನಿ ಮತ್ತು ದೃಶ್ಯ ಕಾರ್ಮಿಕರು ಮತ್ತು ಇದೇ ರೀತಿಯ ಇತರೆ ಉದ್ಯೋಗಗಳ ಕೆಲಸಗಾರರು ಅಸಂಘಟಿತ ಕಾರ್ಮಿಕರಾಗಿ ಕೆಲಸ ನಿರ್ವಹಿಸುತ್ತಿರುವುದನ್ನು ಕಾಣುತ್ತಿದ್ದೇವೆ.

ಈ ಕಾರ್ಮಿಕರಿಗೆ ಜೀವನ ಸಂಧ್ಯಾಕಾಲದಲ್ಲಿ ದುಡಿದು ಪೋಷಿಸಿಕೊಳ್ಳಲು ಆರ್ಥಿಕ ಮೂಲಗಳು ಇರುವುದಿಲ್ಲ. ಇಂತಹ ಅಸಂಘಟಿತ ವಲಯದ ಕಾರ್ಮಿಕರಿಗೆ ಅವರ ವಯೋವೃದ್ಧ ವೇಳೆಯಲ್ಲಿ ಸಾಮಾಜಿಕ ಭದ್ರತೆ ಕಲ್ಪಿಸಲು ಭಾರತ ಸರ್ಕಾರವು ಪ್ರಧಾನಮಂತ್ರಿ ಶ್ರಮಯೋಗಿ ಮಾನ್‍ಧನ್(ಪಿಎಂ-ಎಸ್‍ವೈಎಂ) ಎಂಬ ಮಹತ್ವಾಕಾಂಕ್ಷಿ ವಂತಿಗೆ ಆಧಾರಿತ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಲಾಗಿದೆ ಎಂದು ತಾಲೂಕು ಕಾರ್ಮಿಕ ಅಧಿಕಾರಿ ಯತ್ನಟ್ಟಿ ಅವರು ತಿಳಿಸಿದ್ದಾರೆ.

ಅರ್ಹತೆಗಳು: ಯೋಜನೆಗೆ ಒಳಪಡುವ ಕಾರ್ಮಿಕ ಅಸಂಘಟಿತ ವಲಯದ ಕಾರ್ಮಿಕರಾಗಿದ್ದು, 18 ರಿಂದ 40 ವರ್ಷದೊಳಗಿರಬೇಕು. ಅವರ ಮಾಸಿಕ ಆದಾಯ ರೂ. 15,000 ಅಥವಾ ಅದಕ್ಕಿಂತ ಕಡಿಮೆ ಇರಬೇಕು. ಅವರು ಆದಾಯ ತೆರಿಗೆ ಇಎಸ್‍ಐ, ಪಿಎಫ್, ಎನ್‍ಪಿಎಸ್ ಯೋಜನೆಯ ವ್ಯಾಪ್ತಿಗೆ ಒಳಪಟ್ಟಿರಬಾರದು. ಬ್ಯಾಂಕ್ ಉಳಿತಾಯ ಖಾತೆ ಮತ್ತು ಅಧಾರ್ ಸಂಖ್ಯೆ ಹೊಂದಿರಬೇಕು.

ಫಲಾನುಭವಿಗಳು ನೋಂದಣಿ ವಿಧಾನಗಳು: ಅರ್ಹ ಅಸಂಘಟಿತ ಕಾರ್ಮಿಕರು ಹತ್ತಿರದ ಕಾಮನ್ ಸರ್ವೀಸ್ ಸೆಂಟರ್ (ಸಿಎಸ್‍ಸಿ)ಗಳಲ್ಲಿ ಯೋಜನೆಯಡಿ ಫಲಾನುಭವಿಗಳಾಗಿ ನೋಂದಾಯಿಸಬಹುದಾಗಿದೆ. ಸಿಎಸ್‍ಸಿಗಳ ವಿವರಗಳನ್ನು ಹತ್ತಿರದ ಎಲ್‍ಐಸಿ ಶಾಖೆಗಳು, ಕಾರ್ಮಿಕ ಇಲಾಖೆ, ಕೇಂದ್ರ ಸರ್ಕಾರದ ಕಾರ್ಮಿಕ ಇಲಾಖೆ, ಇಎಸ್‍ಐ ಕಾರ್ಪೋರೇಷನ್ ಹಾಗೂ ಭವಿಷ್ಯನಿಧಿ ಸಂಘಟನೆಯ ಕಚೇರಿಗಳು ಹಾಗೂ ಇಲಾಖೆಯ ವೆಬ್ ವಿಳಾಸಗಳು ಹಾಗೂ ವೆಬ್ ವಿಳಾಸ hಣಣಠಿ;//ಟoಛಿಚಿಣoಡಿ.ಛಿsಛಿಛಿಟouಜ ಗಳಲ್ಲಿ ಪಡೆಯಬಹುದು.

ಕಾರ್ಮಿಕರು ತಮ್ಮೊಂದಿಗೆ ಆರಂಭಿಕ ವಂತಿಕೆ ಮೊತ್ತ, ಆಧಾರ್ ಕಾರ್ಡ್, ಖಾತೆ ಹೊಂದಿರುವ ಬ್ಯಾಂಕಿನ ಐಎಫ್‍ಎಸ್‍ಸಿ ಕೋಡ್ ವಿವರಗಳೊಂದಿಗೆ (ಬ್ಯಾಂಕ್ ಪಾಸ್‍ಪುಸ್ತಕ, ಚೆಕ್ ಪುಸ್ತಕ, ಬ್ಯಾಂಕ್ ಸ್ಟೇಟ್‍ಮೆಂಟ್‍ನ್ನು) ತಮ್ಮ ನಾಮ ನಿರ್ದೇಶಿತರ ವಿವರಗಳು ಮತ್ತು ಮೊಬೈಲ್ ಹ್ಯಾಂಡ್‍ಸೆಟ್‍ನೊಂದಿಗೆ ಕಾಮನ್ ಸರ್ವೀಸ್ ಸೆಂಟರ್‍ಗಳಿಗೆ ಬರುವುದು. ಆರಂಭಿಕ ವಂತಿಗೆಯನ್ನು ನಗದು ರೂಪದಲ್ಲಿ ಪಾವತಿಸುವುದು ಹಾಗೂ ತದ ನಂತರದ ಮಾಸಿಕ ವಂತಿಕೆಯನ್ನು ಅವರ ಖಾತೆಯಿಂದ ಆಟೋ-ಡೆಬಿಟ್ ಮೂಲಕ ಕಟಾವು ಮಾಡಿಕೊಳ್ಳಲಾಗುತ್ತದೆ.

ಯೋಜನೆಯ ಸೌಲಭ್ಯಗಳು: ಸರ್ಕಾರವು ಚಂದಾದಾರರು ಪಾವತಿಸುವ ವಂತಿಗೆಗೆ ಸಮಾನಾಂತರ ವಂತಿಗೆಯನ್ನು ಪಿಂಚಣಿ ಖಾತೆಗೆ ಪಾವತಿಸುತ್ತದೆ. ಫಲಾನುಭವಿಯ ವಯಸ್ಸು 60 ವರ್ಷ ಪೂರ್ಣಗೊಂಡ ನಂತರ ತಿಂಗಳಿಗೆ 3 ಸಾವಿರ ರೂ ಗಳ ಖಚಿತ ಕನಿಷ್ಟ ಮಾಸಿಕ ಪಿಂಚಣಿ ಪಡೆಯಲು ಅರ್ಹರಾಗುತ್ತಾರೆ.

ಚಂದಾದಾರರು 10 ವರ್ಷದೊಳಗೆ ಯೋಜನೆಯಿಂದ ನಿರ್ಗಮಿಸಿದಲ್ಲಿ, ಅವರು ಪಾವತಿಸಿರುವ ವಂತಿಗೆಯನ್ನು ಮಾತ್ರ ಆ ಅವಧಿಗೆ ಉಳಿತಾಯ ಖಾತೆಗೆ ಪಾವತಿಸಲಾಗುವ ಬಡ್ಡಿಯೊಂದಿಗೆ ಹಿಂದಿರುಗಿಸಲಾಗುತ್ತದೆ. 10 ವರ್ಷ ಅಥವಾ ಅದಕ್ಕಿಂತ ಹೆಚ್ಚು ಅವಧಿಯ ನಂತರ ನಿರ್ಗಮಿಸಿದಲ್ಲಿ ಅವರು ಪಾವತಿಸಿದ ವಂತಿಗೆಯೊಂದಿಗೆ ಪಿಂಚಣಿ ಖಾತೆಗೆ ಜಮೆಯಾಗಿರುವ ಬಡ್ಡಿ ಅಥವಾ ಉಳಿತಾಯ ಖಾತೆಗೆ ಪಾವತಿಸಲಾಗುವ ಬಡ್ಡಿ ಇವುಗಳಲ್ಲಿ ಯಾವುದು ಹೆಚ್ಚೋ ಅದನ್ನು ಪಾವತಿಸಲಾಗುವುದು.

ಫಲಾನುಭವಿಯು ನಿರಂತರವಾಗಿ ವಂತಿಗೆಯನ್ನು ಪಾವತಿಸಿದ್ದು, ಅವರು 60 ವರ್ಷದೊಳಗೆ ಮೃತಪಟ್ಟಲ್ಲಿ ಅಥವಾ ಶಾಶ್ವತ ಅಂಗ ನ್ಯೂನತೆಯಿಂದ ವಂತಿಗೆಯನ್ನು ಪಾವತಿಸಲು ಸಾಧ್ಯವಾಗದಿದ್ದಲ್ಲಿ ಅವನ ಮತ್ತು ಅವಳ ಸಂಗಾತಿ ನಂತರ ಈ ಯೋಜನೆಗೆ ಸೇರಬಹುದಾಗಿದ್ದು, ಕಂತನ್ನು ಪಾವತಿಸಿ ಮುಂದುವರಿಸಬಹುದಾಗಿದೆ ಅಥವಾ ಕಂತನ್ನು ಬಡ್ಡಿಯೊಂದಿಗೆ ಪಡೆಯಲು ಅರ್ಹರಿರುತ್ತಾರೆ.

ಪಿಂಚಣಿ ಅರಂಭಗೊಂಡ ನಂತರ ಚಂದಾದಾರರು ಮೃತಪಟ್ಟಲ್ಲಿ ಅವರ ಪತ್ನಿ-ಪತಿ ಮಾತ್ರ ಪಿಂಚಣಿಯ ಶೇ. 50 ರಷ್ಟು ಪಿಂಚಣಿ ಪಡೆಯಲು ಅರ್ಹರು. ಯೋಜನೆ ವಿದ್ಯುನ್ಮಾನ ಆಧಾರಿತವಾಗಿದ್ದು ಎಸ್‍ಎಂಎಸ್ ಮೂಲಕ ಎಲ್ಲಾ ವ್ಯವಹಾರಗಳ ಮಾಹಿತಿ ಫಲಾನುಭವಿಗಳಿಗೆ ಕಾಲ ಕಾಲಕ್ಕೆ ತಿಳಿಸಲಾಗುವುದು.

ಸಹಾಯ ಕೇಂದ್ರಗಳು ಮತ್ತು ಸಂಪರ್ಕಿಸಬೇಕಾದ ವಿಳಾಸಗಳು: ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆಯ ಕಚೇರಿಗಳು, ಎಲ್‍ಐಸಿಯ ಶಾಖಾ ಕಚೇರಿಗಳು, ಇಪಿಎಫ್‍ಒ ಮತ್ತು ಇಎಸ್‍ಐಸಿ ಕಚೇರಿಗಳು. ಟೋಲ್ ಫ್ರೀ ಕಾಲ್ ಸೆಂಟರ್ ಸಂಖ್ಯೆ 1800-267-6888, ಎಲ್‍ಐಸಿಯು ವೆಬ್‍ಸೈಟ್ ವಿಳಾಸ ತಿತಿತಿ.ಟiಛಿiಟಿಜiಚಿ.iಟಿ ಸಮೀಪದ ಸಿಎಸ್‍ಸಿ ಸೆಂಟರ್‍ಗಳಿಗಾಗಿ hಣಣಠಿ://ಟoಛಿಚಿಣoಡಿ.ಛಿsಛಿಛಿಟouಜ.iಟಿ ಹೆಚ್ಚಿನ ಮಾಹಿತಿಗೆ mಚಿಚಿಟಿಜhಚಿಟಿ.iಟಿ ನ್ನು ಸಂಪರ್ಕಿಸಬಹುದು ಎಂದು ತಾಲೂಕು ಹಿರಿಯ ಕಾರ್ಮಿಕ ನಿರೀಕ್ಷಕ ಯತ್ನಟ್ಟಿ ತಿಳಿಸಿದ್ದಾರೆ.