ಕಣಿವೆ, ಡಿ. 15: ಕರ್ನಾಟಕ ಪ್ರದೇಶ ಹೊಟೇಲ್ ಉಪಹಾರ ಮಂದಿರಗಳ ಸಂಘದ ವತಿಯಿಂದ ಮೈಸೂರಿನಲ್ಲಿ ನಡೆದ ಆತಿಥ್ಯ ರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕುಶಾಲನಗರದ ಅತಿಥಿ ಕಂಪರ್ಟ್ ಹೊಟೇಲ್ ಮಾಲೀಕ ಭಾಸ್ಕರ್ ಅವರು ಪಾಲ್ಗೊಂಡು ಪ್ರಶಸ್ತಿ ಸ್ವೀಕರಿಸಿದರು. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಭೀಮಸೇತು ಮುನಿವೃಂದ ಮಠದ ಶ್ರೀ ರಘುವರೇಂದ್ರ ತೀರ್ಥರು ಸಾನಿಧ್ಯ ವಹಿಸಿದ್ದ ಕಾರ್ಯಕ್ರಮದಲ್ಲಿ ಹೋಟೆಲ್ ಅಸೋಸಿಯೇಷನ್ ರಾಜ್ಯ ಸಂಘದ ಅಧ್ಯಕ್ಷ ಚಂದ್ರಶೇಖರ ಹೆಬ್ಬಾರ್, ಮೈಸೂರು ಶಾಸಕರಾದ ರಾಮದಾಸ್, ಎಲ್.ನಾಗೇಂದ್ರ, ಮೈಸೂರು ಮಹಾ ಪೌರರಾದ ಪುಷ್ಪಲತಾ ಜಗನ್ನಾಥ್, ಕೊಡಗು ಜಿಲ್ಲಾ ಹೋಟೆಲ್ ಅಸೋಸಿಯೇಷನ್ ಅಧ್ಯಕ್ಷ ಬಿ.ಆರ್ ನಾಗೇಂದ್ರ ಪ್ರಸಾದ್ ಮತ್ತಿತರರಿದ್ದರು.