ವೀರಾಜಪೇಟೆ, ಡಿ.15: ಗೋಣಿಕೊಪ್ಪಲಿನ ವೈಸ್‍ಮನ್ ಕ್ಲಬ್ ವತಿಯಿಂದ ಇಲ್ಲಿನ ಸಂತ ಅನ್ನಮ್ಮ ದ್ವಿಶತಮಾನೋತ್ಸವ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟವನ್ನು ಅಂತರಾಷ್ಟ್ರೀಯ ವೈಸ್‍ಮನ್ ಕ್ಲಬ್‍ನ ಜಿಲ್ಲಾ ಗವರ್ನರ್ ರಾಜನ್ ಉದ್ಘಾಟಿಸಿದರು.
ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಕ್ಲಬ್‍ನ ಅಧ್ಯಕ್ಷ ಬಿ.ಆರ್.ಶೆಟ್ಟಿ ವಹಿಸಿದ್ದರು.
ಸಮಾರಂಭದಲ್ಲಿ ಅತಿಥಿಗಳಾಗಿ ಸಂತ ಅನ್ನಮ್ಮ ದೇವಾಲಯದ ಹಿರಿಯ ಧರ್ಮಗುರು ರೆ.ಫಾ. ಮದಲೈಮುತ್ತು ಭಾಗವಹಿಸಿದ್ದರು.
ವೇದಿಕೆಯಲ್ಲಿ ಸಂಘಟನೆಯ ಸಂಯೋಜಕರಾದ ಟಿ.ಜೆ.ಅಂತೋಣಿ, ಕಾರ್ಯದರ್ಶಿ ಅಂತೋಣಿ ರಾಬಿನ್, ಖಜಾಂಚಿ ಪಿ.ಕೆ.ರಷೀದ್ ಉಪಸ್ಥಿತರಿದ್ದರು. ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ 150 ಮಂದಿ ಪಾಲ್ಗೊಂಡಿದ್ದರು.