ಮಡಿಕೇರಿ, ಡಿ. 15: ಅಖಿಲ ಭಾರತ 85ನೇ ಕನ್ನಡ ಸಾಹಿತ್ಯ ಸಮ್ಮೇಳನವು ಫೆಬ್ರವರಿ 5, 6 ಮತ್ತು 7 ರಂದು ಕಲಬುರಗಿಯಲ್ಲಿ ನಡೆಯಲಿದೆ. ಈ ಸಮ್ಮೇಳನದಲ್ಲಿ ಪುಸ್ತಕ, ವಾಣಿಜ್ಯ ಮಳಿಗೆಗಳನ್ನು ತೆರೆಯಲು ನೋಂದಾಯಿಸಿಕೊಳ್ಳಬಹುದು.

ಮೂರು ದಿವಸಗಳಿಗೆ ಒಂದು ಹಾಗೂ ಒಂದಕ್ಕಿಂತ ಹೆಚ್ಚು ಪುಸ್ತಕ ಮಳಿಗೆ ಬೇಕಾದಲ್ಲಿ ತಲಾ ರೂ. 2,500, ವಾಣಿಜ್ಯ ಮಳಿಗೆಗಳಿಗೆ ತಲಾ 3 ಸಾವಿರ ಬಾಡಿಗೆ ನಿಗದಿಪಡಿಸಿದೆ. ಮಳಿಗೆಗಾಗಿ ಬೆಂಗಳೂರಿನ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ, ಸ್ವಾಗತ ಸಮಿತಿ, 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ, ಕಲಬುರಗಿ ಇಲ್ಲಿ ನೋಂದಾಯಿಸಬಹುದು. ಮೊದಲು ಬಂದವರಿಗೆ ಆದ್ಯತೆ. ಜನವರಿ 14 ರೊಳಗೆ ಹೆಸರು ನೋಂದಾಯಿಸಿಕೊಳ್ಳಬೇಕು.

ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಮಳಿಗೆಗಾಗಿ ನೋಂದಾಯಿಸಿಕೊಳ್ಳುವವರು ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು, ಪ್ರಧಾನ ಕಾರ್ಯದರ್ಶಿ, 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಮಿತಿ, ಕಲಬುರಗಿ ಇಲ್ಲಿಗೆ ಡಿಡಿ ತೆಗೆದು ಕಳುಹಿಸಬಹುದು. ಅಥವಾ ನಗದನ್ನು ಖುದ್ದಾಗಿ ಕಲಬುರಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಭವನ, ಸರದಾರ್ ವಲ್ಲಭಬಾಯಿ ಪಟೇಲ್ ವೃತ್ತ, ಕಲಬುರಗಿ-585102 ಇಲ್ಲಿಗೆ ಸಲ್ಲಿಸಬೇಕು. ಮಳಿಗೆಯಲ್ಲಿನ ಸೌಲಭ್ಯದ ಬಗ್ಗೆ ಹೆಚ್ಚಿನ ಮಾಹಿತಿ ಕುರಿತು ದೂ.08472-277411 ಗೆ ಮತ್ತು ಶ್ರೀ ವೀರಭದ್ರ ಸಿಂಪಿ, ಅಧ್ಯಕ್ಷರು, ಕಲಬುರಗಿ ಕನ್ನಡ ಸಾಹಿತ್ಯ ಪರಿಷತ್ತು (ಮೊ. 9448577411, 9900838003) ಅವರನ್ನು ಸಂಪರ್ಕಿಸಬಹುದು ಹಾಗೂ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ 2020 ಜನವರಿ 14 ರೊಳಗೆ ನಗದು ನೀಡಿ ಮಳಿಗೆ ಕಾದಿರಿಸಬಹುದಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕೋಶಾಧ್ಯಕ್ಷ ಪಿ.ಮಲ್ಲಿಕಾರ್ಜುನಪ್ಪ ತಿಳಿಸಿದ್ದಾರೆ.