ಮಡಿಕೇರಿ, ಡಿ. 15: ಪ್ರವಾಸೋದ್ಯಮ ಇಲಾಖೆಯಿಂದ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಮತ್ತು ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ವಿದ್ಯಾವಂತ ನಿರುದ್ಯೋಗ ಯುವಕ-ಯುವತಿಯರಿಗೆ ಉದ್ಯೋಗ ಕಲ್ಪಿಸುವ ದೃಷ್ಟಿಯಿಂದ ಪ್ರವಾಸಿ ಟ್ಯಾಕ್ಸಿಗಳನ್ನು ವಿತರಿಸಲಾಗುತ್ತಿದೆ. ಮುಂದುವರೆದು ಇದನ್ನು ಹೊರತುಪಡಿಸಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮತ್ತು ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ವಿದ್ಯಾವಂತ ನಿರುದ್ಯೋಗ ಯುವಕ-ಯುವತಿಯರಿಗೆ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಉದ್ಯೋಗ ಕಲ್ಪಿಸಲು ಯಾವ ರೀತಿಯ ಯೋಜನೆ ಕೈಗೊಳ್ಳಬಹುದು ಎಂಬ ಬಗ್ಗೆ ಸಾರ್ವಜನಿಕರಿಂದ ಸಲಹೆ ಹಾಗೂ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ. ಈ ಬಗ್ಗೆ ಸಾರ್ವಜನಿಕರು ವಿದ್ಯಾವಂತ ನಿರುದ್ಯೋಗ ಯುವಕ-ಯುವತಿಯರಿಗೆ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಉದ್ಯೋಗ ಕಲ್ಪಿಸುವ ಬಗ್ಗೆ ಸಲಹೆ ಹಾಗೂ ಅಭಿಪ್ರಾಯಗಳನ್ನು ಸಹಾಯಕ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಸ್ಟೀವರ್ಟ್ ಹಿಲ್ ರಸ್ತೆ, ಮಡಿಕೇರಿ ಕೊಡಗು ಜಿಲ್ಲೆ 571201, ಕಚೇರಿಗೆ ಖುದ್ದಾಗಿ ಭೇಟಿ ನೀಡಿ ಅಥವಾ ಪತ್ರದ ಮೂಲಕ ಅಥವಾ ದೂ. 08272-228580 (ಕಚೇರಿ ವೇಳೆಯಲ್ಲಿ) /ಅಥವಾ ಚಿಜಞoಜಚಿguಣouಡಿism@gmಚಿಟ.ಛಿom ಮುಖಾಂತರ ತಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ತಾ. 20 ರೊಳಗೆ ಸಲ್ಲಿಸುವಂತೆ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.