ಸೋಮವಾರಪೇಟೆ, ಡಿ. 14: ಇಲ್ಲಿನ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಬೀದಿ ಬದಿ ವ್ಯಾಪಾರಿಗಳ ಸಂಘಕ್ಕೆ ಚುನಾವಣಾ ಪ್ರಕ್ರಿಯೆ ಪ್ರಾರಂಭವಾಗಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಅಂತಿಮಗೊಂಡಿದೆ.

ಒಟ್ಟು 10 ಸ್ಥಾನಕ್ಕೆ ಆಯ್ಕೆ ಪ್ರಕ್ರಿಯೆ ನಡೆಯಬೇಕಿದ್ದು, ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ 7 ನಾಮಪತ್ರಗಳು ಮಾತ್ರ ಸಲ್ಲಿಕೆಯಾದವು. ಮಹಿಳೆಯರಿಗೆ ಮೀಸಲಿದ್ದ 3 ಸ್ಥಾನಗಳಿಗೆ ನಾಮಪತ್ರ ಸಲ್ಲಿಕೆಯಾದರೆ, ಎಸ್.ಸಿ. ಮತ್ತು ಎಸ್.ಟಿ., ವಿಶೇಷಚೇತನ ವ್ಯಕ್ತಿಗಳಿಗೆ ಮೀಸಲಾಗಿದ್ದ ಸ್ಥಾನಗಳಿಗೆ ಯಾವದೇ ನಾಮಪತ್ರ ಸಲ್ಲಿಕೆಯಾಗಿಲ್ಲ.

ಉಳಿದಂತೆ ಹಿಂದುಳಿದ ವರ್ಗದಿಂದ 1, ಸಾಮಾನ್ಯ ಕ್ಷೇತ್ರದಿಂದ 2 ನಾಮಪತ್ರಗಳು ಸಲ್ಲಿಕೆಯಾದವು. ತಾ. 15 ರಂದು ನಾಮಪತ್ರ ವಾಪಸಾತಿಗೆ ಕೊನೆಯ ದಿನವಾಗಿದ್ದು, ಅಂದೇ ಆಯ್ಕೆ ಪ್ರಕ್ರಿಯೆಯೂ ನಡೆಯಲಿದೆ ಎಂದು ಸಹಕಾರ ಅಭಿವೃದ್ಧಿ ಅಧಿಕಾರಿ ಹಾಗೂ ಚುನಾವಣಾಧಿಕಾರಿಗಳೂ ಆಗಿರುವ ಎಂ.ಇ. ಮೋಹನ್ ತಿಳಿಸಿದ್ದಾರೆ.