ಮಡಿಕೇರಿ, ಡಿ. 15: ಅಖಿಲ ಭಾರತ 85ನೇ ಕನ್ನಡ ಸಾಹಿತ್ಯ ಸಮ್ಮೇಳನವು ಫೆಬ್ರವರಿ 5, 6 ಮತ್ತು 7 ರಂದು ಕಲಬುರಗಿಯಲ್ಲಿ ನಡೆಯಲಿದೆ.
ಈ ನುಡಿ ಜಾತ್ರೆಯಲ್ಲಿ ಭಾಗವಹಿಸಲು ಇಚ್ಛಿಸುವ ಅಭಿಮಾನಿಗಳು ಪ್ರತಿನಿಧಿಯಾಗಿ ತಮ್ಮ ಹೆಸರುಗಳನ್ನು ಆಯಾಯ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರುಗಳಲ್ಲಿ ಅಥವಾ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ರೂ. 25 ಪ್ರತಿನಿಧಿ ಶುಲ್ಕ ಪಾವತಿಸಿ 2020ರ ಜನವರಿ 14 ರೊಳಗೆ ನೋಂದಾಯಿಸಿಕೊಳ್ಳುವಂತೆ ಕೋರಿದೆ. ಅವಧಿ ಮೀರಿ ಬರುವ ಕೋರಿಕೆಗಳಿಗೆ ಹಾಗೂ ಸಮ್ಮೇಳನ ನಡೆಯುವ ಸ್ಥಳದಲ್ಲಿ ಪ್ರತಿನಿಧಿಗಳ ನೋಂದಣಿಗೆ ಅವಕಾಶವಿಲ್ಲ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕೋಶಾಧ್ಯಕ್ಷ ಪಿ. ಮಲ್ಲಿಕಾರ್ಜುನಪ್ಪ ತಿಳಿಸಿದ್ದಾರೆ.