ಮಡಿಕೇರಿ, ಡಿ. 15: ರಾಷ್ಟ್ರೀಯ ಪೌರತ್ವ (ತಿದ್ದುಪಡಿ) ಕಾಯ್ದೆ ಯನ್ನು ಕೂಡಲೇ ಹಿಂದಕ್ಕೆ ಪಡೆಯಬೇಕು ಎಂದು ಸಿಪಿಐ (ಎಂಎಲ್) ರೆಡ್‍ಸ್ಟಾರ್ ಪಕ್ಷ ಒತ್ತಾಯಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ರಾಜ್ಯ ಕಾರ್ಯದರ್ಶಿ ಡಿ.ಎಸ್. ನಿರ್ವಾಣಪ್ಪ ಈ ಬಗ್ಗೆ ತಾ. 21 ರಂದು ಮಡಿಕೇರಿಯಲ್ಲಿ ಸಮಾವೇಶ ನಡೆಸಲಾಗುವುದು ಎಂದರು.

ಕರ್ನಾಟಕ ರೈತ ಸಂಘದ ಜಿಲ್ಲಾಧ್ಯಕ್ಷ ಹೆಚ್.ಇ. ಸಣ್ಣಪ್ಪ ಮಾತನಾಡಿ, ಇಂತಹ ಪೌರತ್ವ ನೋಂದಣಿ ಮತ್ತು ಕಾಯ್ದೆಗಳಿಂದ ಯಾವುದೇ ಪ್ರಯೋಜನವಿಲ್ಲ ವಾದ್ದರಿಂದ, ಈ ಕಾಯ್ದೆಯನ್ನು ತಕ್ಷಣ ಹಿಂದಕ್ಕೆ ಪಡೆಯಬೇಕೆಂದು ಆಗ್ರಹಿಸಿದರು.

ಗೋಷ್ಠಿಯಲ್ಲಿ ಸಿಪಿಐ(ಎಂಎಲ್) ರೆಡ್‍ಸ್ಟಾರ್‍ನ ಜಿಲ್ಲಾ ಕಾರ್ಯದರ್ಶಿ ಎಸ್.ಆರ್. ಮಂಜುನಾಥ್ ಉಪಸ್ಥಿತರಿದ್ದರು.