ಸುಂಟಿಕೊಪ್ಪ, ಡಿ. 17: ಗರಗಂದೂರು ಗ್ರಾಮದ ಶಂಕರಪ್ಪ ಎಂಬವರ ಕಾಫಿ ತೋಟದಲ್ಲಿ ರೈಟರ್ ಉಣ್ಣಿಕೃಷ್ಣ ಎಂಬಾತ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆಸಿದ್ದು ಪೊಲೀಸರು ದಾಳಿ ಮಾಡಿ ಆರೋಪಿಯನ್ನು ಬಂಧಿಸಿ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕೊಡಗು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ|| ಸುಮನ್ ಡಿ ಪೆನ್ನೇಕರ್ ಅವರ ನಿರ್ದೇಶನದಂತೆ ಸೋಮವಾರಪೇಟೆ ಉಪ ವಿಭಾಗದ ಉಪ ಅಧೀಕ್ಷಕ ಪಿ.ಕೆ. ಮುರುಳೀಧರ ಅವರ ಮಾರ್ಗದರ್ಶನದಲ್ಲಿ ಕುಶಾಲನಗರ ವೃತ್ತ ನಿರೀಕ್ಷಕ ಮಹೇಶ್, ಸುಂಟಿಕೊಪ್ಪ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕ ತಿಮ್ಮಪ್ಪ ಬಿ. ಹಾಗೂ ಸಹಾಯಕ ಪೊಲೀಸ್ ಉಪ ನಿರೀಕ್ಷಕರುಗಳಾದ ರಮೇಶ್ ಮತ್ತು ಗಣೇಶ್ ಪಿ.ಎಂ. ಮತ್ತು ಸಿಬ್ಬಂದಿಗಳಾದ ಸತೀಶ್ ಯು.ಎ., ಪುನೀತ್‍ಕುಮಾರ್ ಗಾಂಜಾ ಗಿಡಗಳನ್ನು ಪತ್ತೆ ಹಚ್ಚಿ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.