ಮಡಿಕೇರಿ, ಡಿ.17 : ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ವಿಧಾನ ಪರಿಷತ್ ಸದಸ್ಯರ ಅನುದಾನದಡಿ ರೂ. 4 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ರಸ್ತೆಯನ್ನು ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ಸುನಿಲ್ ಸುಬ್ರಮಣಿ ಅವರುಗಳು ಉದ್ಘಾಟಿಸಿ ದರು. ಕಾಲೇಜಿನ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಬಿ.ಕೆ. ಜಗದೀಶ್ ಸೇರಿದಂತೆ ನಗರಸಭಾ ಮಾಜಿ ಸದಸ್ಯರು ಇತರರು ಇದ್ದರು.