ಮಡಿಕೇರಿ, ಡಿ. 17: ಸ್ವಸ್ಥ-ವಿಶೇಷ ಶಿಕ್ಷಣ ಮತ್ತು ಪುನರ್ವಸತಿ ಕೇಂದ್ರ, ಸಮುದಾಯ ಆಧಾರಿತ ಪುನರ್ವಸತಿ ಕಾರ್ಯಕ್ರಮ, ದಿ ಕೂರ್ಗ್ ಫೌಂಡೇಷನ್, ಪಾಲಿಬೆಟ್ಟ ಟಾಟಾ ಕಾಫಿ ಮತ್ತು ವೀರಾಜಪೇಟೆಯ ದಂತ ಮತ್ತು ವೈದ್ಯಕೀಯ ವಿಜ್ಞಾನ ಸಂಸ್ಥೆ ಸಹಭಾಗಿತ್ವದಲ್ಲಿ ವಿಶೇಷಚೇತನರು ಮತ್ತು ಅವರ ಪೋಷಕರಿಗೆ ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ತಾ. 19 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಸುಂಟಿಕೊಪ್ಪ ಸ್ವಸ್ಥ ವಿಶೇಷ ಶಾಲೆ ಸಭಾಂಗಣ(ಮಾದಪುರ ರಸ್ತೆ)ದಲ್ಲಿ ನಡೆಯಲಿದೆ.

ಮೊದಲ ಹಂತದಲ್ಲಿ ಸುಂಟಿಕೊಪ್ಪ, ಹರದೂರು, ಮಾದಾಪುರ, ಐಗೂರು, ಕೆದ್‍ಕಲ್, ಚೆಟ್ಟಳ್ಳಿ, 7ನೇ ಹೊಸಕೋಟೆ, ಕಂಬಿಬಾಣೆ, ಕೊಡಗರಹಳ್ಳಿ, ಗುಡ್ಡೆಹೊಸೂರು ಮತ್ತು ಕುಶಾಲನಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿಶೇಷಚೇತನರಿಗೆ ಮೊದಲ ಆದ್ಯತೆ ಮೇರೆಗೆ, ಅವರ ಪೋಷಕರಿಗೂ ಸಹ ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸೆ ಶಿಬಿರ ನಡೆಯಲಿದೆ. ಈ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿಶೇಷಚೇತನರು ಮತ್ತು ಅವರ ಪೋಷಕರು ಸದುಪಯೋಗಪಡಿಸಿಕೊಳ್ಳುವಂತೆ ಕೋರಿದೆ. ಹೆಚ್ಚಿನ ಮಾಹಿತಿಗೆ 08276-262502, 8762303554 ನ್ನು ಸಂಪರ್ಕಿಸಬಹುದು ಎಂದು ಸ್ವಸ್ಥ ಶಾಲೆ ನಿರ್ದೇಶಕಿ ಆರತಿ ಸೋಮಯ್ಯ ತಿಳಿಸಿದ್ದಾರೆ.