ಮಡಿಕೇರಿ, ಡಿ. 17: ಕೊಡಗು ಜಿಲ್ಲೆಯ ಪ್ರವಾಸಿ ಕೇಂದ್ರಗಳು ಮತ್ತು ಕೆಲವೆಡೆ ನಕಲಿ ಚಾಕಲೇಟ್ ಮಾರಾಟ ನಡೆಯುತ್ತಿರುವ ಬಗ್ಗೆ ‘ಶಕ್ತಿ’ಯಲ್ಲಿ ವರದಿಯಾದ ಬೆನ್ನಲ್ಲೇ ಆಹಾರ ಇಲಾಖೆ ಅಧಿಕಾರಿಗಳು ಮಡಿಕೇರಿಯಲ್ಲಿ ದಾಳಿ ನಡೆಸಿ; ಕೆಲವೆಡೆ ವರ್ತಕರಿಗೆ ನೋಟೀಸ್ ನೀಡಿದ್ದಾರೆ.

ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ದಂಧೆ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳ ಸೂಚನೆ ಹಿನ್ನೆಲೆಯಲ್ಲಿ ಜಿಲ್ಲೆಯ ಆಹಾರ ಇಲಾಖೆಯ ಹಿರಿಯ ಅಧಿಕಾರಿ ಶಿವಕುಮಾರ್, ರಾಜಾಸೀಟ್, ಅಭಿಪಾಲ್ಸ್ ಮತ್ತು ಪಟ್ಟಣದ ವಿವಿಧ ಕಡೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆಹಾರ ಪದಾರ್ಥಗಳನ್ನು ಮಾರಾಟ ಮಾಡಲು ನಿಯಮಾನುಸಾರ ಪರವಾನಗಿ ಪಡೆಯಬೇಕು, ನಕಲಿ ಆಹಾರ ಪದಾರ್ಥಗಳನ್ನು ಮಾರಾಟ ಮಾಡುವವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವದು ಎಂದು ಎಚ್ಚರಿಕೆ ನೀಡಿರುವ ಅಧಿಕಾರಿಗಳು ಹಲವು ವರ್ತಕರಿಗೆ ನೋಟೀಸ್ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲೆಡೆ ಹಲವು ತಂಡಗಳು ಕಾರ್ಯಾಚರಣೆ ನಡೆಸಲಿದೆ ಎಂದು ಶಿವಕುಮಾರ್ ತಿಳಿಸಿದ್ದಾರೆ. ಈ ಸಂದರ್ಭ ಮಡಿಕೇರಿ ರಕ್ಷಣ ವೇದಿಕೆಯ ಸಂಚಾಲಕ ಪವನ್‍ಕುಮಾರ್ ಮತ್ತಿತರರು ಇದ್ದರು.