*ಜಿಲ್ಲಾ ಪೊಲೀಸ್ ವತಿಯಿಂದ ತಾ. 18 ರಿಂದ 20 ರವರೆಗೆ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ವಾರ್ಷಿಕ ಕ್ರೀಡಾಕೂಟ ನಡೆಯಲಿದೆ. ತಾ. 18 ರಂದು ಬೆಳಿಗ್ಗೆ 9 ಗಂಟೆಗೆ ಕ್ರೀಡಾಕೂಟವನ್ನು ಅಂತರ್ರಾಷ್ಟ್ರೀಯ ಹಾಕಿ ಪಟು ಎಸ್.ವಿ. ಸುನೀಲ್ ಆಚಾರ್ಯ ಉದ್ಘಾಟಿಸಲಿದ್ದಾರೆ.

ತಾ. 20 ರಂದು ಸಂಜೆ 4 ಗಂಟೆಗೆ ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭ ನಡೆಯಲಿದೆ. ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆಣ್ಣೇಕರ್, ಇತರರು ಪಾಲ್ಗೊಳ್ಳಲಿದ್ದಾರೆ.

* ನೆಹರು ಯುವ ಕೇಂದ್ರ, ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ ವತಿಯಿಂದ ತಾ. 18 ರಿಂದ 20 ರವರೆಗೆ ನಗರದ ಮೈತ್ರಿ ಹಾಲ್ ಹತ್ತಿರದ ನಿವೃತ್ತ ಪೊಲೀಸ್ ಸಿಬ್ಬಂದಿಗಳ ಕಟ್ಟಡ ಸ್ವಾಭಿಮಾನ್ ಸಭಾಂಗಣದಲ್ಲಿ ಯುವ ಮುಂದಾಳತ್ವ ಹಾಗೂ ಸಮುದಾಯ ಅಭಿವೃದ್ಧಿ ತರಬೇತಿ ಶಿಬಿರ ನಡೆಯಲಿದೆ.

ತಾ. 18 ರಂದು ಬೆಳಿಗ್ಗೆ 11.30 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಸುಳ್ಯ ಅರಂಬೂರು ಸೇತುವೆಗಳ ಸರದಾರ ಪದ್ಮಶ್ರೀ ಪ್ರಶಸ್ತಿ ವಿಜೇತ ಡಾ.ಗಿರೀಶ್ ಬಾರದ್ವಾಜ್, ನೆಹರು ಯುವ ಕೇಂದ್ರದ ಜಿಲ್ಲಾ ಯುವ ಸಮನ್ವಯ ಅಧಿಕಾರಿ ಕೆ.ಟಿ.ಕೆ. ಉಲ್ಲಾಸ್, ಮಡಿಕೇರಿ ತಾಲೂಕು ಯುವ ಒಕ್ಕೂಟದ ಅಧ್ಯಕ್ಷ ನವೀನ್ ದೇರಳ ಇತರರು ಪಾಲ್ಗೊಳ್ಳಲಿದ್ದಾರೆ.

ತಾ. 20 ರಂದು ಮಧ್ಯಾಹ್ನ 12 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ಪೊಲೀಸ್ ಇಲಾಖೆಯ ಉಪ ಅಧೀಕ್ಷಕ ಬಿ.ಪಿ. ದಿನೇಶ್ ಕುಮಾರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಜಯಲಕ್ಷ್ಮೀ ಬಾಯಿ, ಜಿಲ್ಲಾ ಯುವ ಒಕ್ಕೂಟದ ಕಾರ್ಯದರ್ಶಿ ಕೆ.ಕೆ. ಗಣೇಶ್ ಇತರರು ಪಾಲ್ಗೊಳ್ಳಲಿದ್ದಾರೆ.