ಮಡಿಕೇರಿ, ಡಿ. 17: ಕೃಷಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ ಮತ್ತು ಎಲ್ಲಾ ಅಭಿವೃದ್ಧಿ ಇಲಾಖೆಯ ಸಮನ್ವಯದೊಂದಿಗೆ ರೈತರಿಗೆ ಸಮಗ್ರ ಕೃಷಿ ಮಾಹಿತಿಯನ್ನು ನೀಡುವ ವಿಶಿಷ್ಟ ಕಾರ್ಯಕ್ರಮವನ್ನು ‘ಇಲಾಖೆಗಳ ನಡಿಗೆ ರೈತರ ಬಾಗಿಲಿಗೆ’ ಎಂಬ ಶೀರ್ಷಿಕೆಯಡಿ ಹಮ್ಮಿಕೊಳ್ಳ ಲಾಗುತ್ತದೆ.

ವೀರಾಜಪೇಟೆ ತಾಲೂಕಿನ ಹೋಬಳಿ ಮಟ್ಟದ ಕೃಷಿ ಅಭಿಯಾನ ಕಾರ್ಯಕ್ರಮ ತಾ. 18 ರಂದು ಪೂರ್ವಾಹ್ನ 11 ಗಂಟೆಗೆ ಆರ್ಜಿ-ಬೇಟೋಳಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಕೃಷಿ ವಸ್ತು ಪ್ರದರ್ಶನ ಮತ್ತು ರೈತ ಸಂವಾದದೊಂದಿಗೆ ನಡೆಯಲಿದೆ.