ಚೆಟ್ಟಳ್ಳಿ, ಡಿ. 17: ಚೆಟ್ಟಳ್ಳಿ ಪ್ರೌಢಶಾಲಾ ವಾರ್ಷಿಕೋತ್ಸವ ತಾ. 20 ರಂದು ನಡೆಯಲಿದೆ. ಪೂರ್ವಾಹ್ನ 9.30 ಗಂಟೆಗೆ ಶಾಲಾ ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಾಮಾಜಿಕ ಯುವ ಕಾರ್ಯಕರ್ತ ತೇಲಪಂಡ ಶಿವಕುಮಾರ್ ನಾಣಯ್ಯ ಅವರು ಧ್ವಜಾರೋಹಣ ಹಾಗೂ ಕ್ರೀಡಾ ಜ್ಯೋತಿಯನ್ನು ಬೆಳಗುವುದರ ಮೂಲಕ ಕ್ರೀಡೋತ್ಸವವನ್ನು ಉದ್ಘಾಟಿಸಲಿದ್ದಾರೆ.
ಶಾಲಾ ಮಕ್ಕಳಿಂದ ವ್ಯಾಯಾಮ, ಯೋಗಾಸನ ಹಾಗೂ ಸಾಮೂಹಿಕ ನೃತ್ಯ ಪ್ರದರ್ಶನ ನಡೆಯಲಿದ್ದು, ಕಾರ್ಯಕ್ರಮದ ಅಂಗವಾಗಿ ಚೆಟ್ಟಳ್ಳಿ ಸ್ಪೋಟ್ಸ್ ಕ್ಲಬ್ ವತಿಯಿಂದ ಸಾರ್ವಜನಿಕರಿಗೆ, ನಿಧಾನ ಸೈಕಲ್ ಸ್ಪರ್ಧೆ, ಮೋಟಾರ್ ಸೈಕಲ್ ಸ್ಪರ್ಧೆ ಹಾಗೂ ಹಗ್ಗಜಗ್ಗಾಟ ಸ್ಪರ್ಧೆ ನಡೆಯಲಿದೆ.
ಅಪರಾಹ್ನ 2 ಗಂಟೆಗೆ ಚೆಟ್ಟಳ್ಳಿ ಮಂಗಳ ಸಭಾಂಗಣದಲ್ಲಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಪೇರಿಯನ ಪಿ. ಜಯಾನಂದ ಅವರ ಅಧ್ಯಕ್ಷತೆಯಲ್ಲಿ ಶಾಲಾ ವಾರ್ಷಿಕೋತ್ಸವ ಸಭಾ ಕಾರ್ಯಕ್ರಮ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪಿ. ಲಕ್ಷ್ಮಿ, ಮಡಿಕೇರಿ ತಾಲೂಕು ಕೇತ್ರ ಶಿಕ್ಷಣಾಧಿಕಾರಿ ಟಿ.ಎನ್. ಗಾಯತ್ರಿ ಹಾಗೂ ಕುಶಾಲನಗರ ಕಮ್ಯೂನಿಟಿ ಹೆಲ್ತ್‍ಸೆಂಟರ್‍ನ ಮನಶಾಸ್ತ್ರಜ್ಞರು ಹಾಗೂ ಸ್ಥಳೀಯರಾದ ಕೆಚ್ಚೆಟಿರ ಶಿಲ್ಪ ಮುತ್ತಮ್ಮ ಅವರು ಬಹುಮಾನ ವಿತರಿಸಲಿರುವರು. ವಿದ್ಯಾರ್ಥಿಗಳಿಗೆ ದತ್ತಿನಿಧಿ ಹಾಗೂ ಬಹುಮಾನ ವಿತರಣೆ ನಡೆಯಲಿದ್ದು, ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ.