ವೀರಜಪೇಟೆ, ಡಿ. 17: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಾ. 18 ರಂದು (ಇಂದು) ವೀರಾಜಪೇಟೆಯಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆ ಹಾಗೂ ಸಮಾವೇಶವನ್ನು ಮುಂದೂಡಲಾಗಿದೆ ಎಂದು ಸಂಘಟನೆ ಹಾಗೂ ಸಮಾವೇಶದ ಪ್ರಧಾನ ಸಂಚಾಲಕ ಪಿ.ಎಸ್. ಮುತ್ತ ತಿಳಿಸಿದ್ದಾರೆ. ಜಿ.ಪಂ. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಯರವ ಜನಾಂಗದ ಪ್ರತಿನಿಧಿಗಳನ್ನು ಕರೆಸಿ ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಯರವ ಮುಖಂಡರು ಹಾಗೂ ಬುಡಕಟ್ಟು ವರ್ಗದ ಪ್ರತಿನಿಧಿಗಳ ಜಿಲ್ಲಾಮಟ್ಟದ ಸಭೆ ನಡೆಸಿ ಬೇಡಿಕೆಗಳನ್ನು ಈಡೇರಿಸುವುದಾಗಿ ಆಶ್ವಾಸನೆ ನೀಡಿರುವುದರಿಂದ ಪ್ರತಿಭಟನೆ ಹಾಗೂ ಜಾಗೃತ ಸಮಾವೇಶವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.