ಕುಶಾಲನಗರ, ಡಿ. 17: ಭಾರತೀಯ ಮಹಿಳೆಯರಿಗೆ ಅಪಮಾನವಾಗುವ ರೀತಿಯಲ್ಲಿ ಬಾಲಿಶ ಹೇಳಿಕೆ ನೀಡುತ್ತಿರುವ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ಬಿಜೆಪಿ ಮಹಿಳಾ ಮೋರ್ಚಾ ಪದಾಧಿಕಾರಿಗಳು ಕುಶಾಲನಗರದಲ್ಲಿ ಪ್ರತಿಭಟನೆ ನಡೆಸಿದರು.
ಕುಶಾಲನಗರ ನಾಡುಕಛೇರಿ ಮುಂಭಾಗ ಪ್ರತಿಭಟನೆ ನಡೆಸಿದ ಮಹಿಳಾ ಮೋರ್ಚಾ ಪದಾಧಿಕಾರಿಗಳು ರಾಹುಲ್ ಗಾಂಧಿ ವಿರುದ್ಧ ಧಿಕ್ಕಾರ ಕೂಗಿದರು. ರಾಹುಲ್ ಗಾಂಧಿ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ನಾಡುಕಛೇರಿ ಅಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಜಿ.ಪಂ. ಸದಸ್ಯೆ ಕೆ.ಆರ್. ಮಂಜುಳ, ಮಹಿಳಾ ಮೋರ್ಚಾ ಪದಾಧಿಕಾರಿಗಳಾದ ವಿ.ಕೆ.ಸಾವಿತ್ರಿ, ವೇದಾವತಿ, ಸುಶೀಲಾ, ಕಲ್ಪನಾ, ಎನ್.ಎ.ಸಾವಿತ್ರಿ, ಪವಿತ್ರಾ, ಜ್ಯೋತಿ, ಸುಧಾರಾಣಿ, ರತ್ನಮ್ಮ ಮತ್ತಿತರರು ಇದ್ದರು.