ನಾಪೆÉÇೀಕ್ಲು, ಡಿ. 17: ಹಣೆಬರಹ ಎಂದುಕೊಂಡು ಸೋಮಾರಿತನ ತೋರುವ ಬದಲು ಶ್ರಮಪಟ್ಟು ವಿದ್ಯೆ ಕಲಿತರೆ ಹಣೆಬರಹವನ್ನೂ ಕೂಡ ಬದಲಿಸಲು ಸಾಧ್ಯ ಎಂದು ನಾಪೆÇೀಕ್ಲು ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ. ಕಾವೇರಿ ಪ್ರಕಾಶ್ ಅಭಿಪ್ರಾಯಪಟ್ಟರು.
ಹೊದವಾಡ ರಾಫೆಲ್ಸ್ ಇಂಟರ್ನ್ಯಾಷನಲ್ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.
ವಿದ್ಯೆ ಸಾಧಕನ ಸೊತ್ತು. ಸೋಮಾರಿಗಳ ಸೊತ್ತಲ್ಲ. ಕಠಿಣ ಪರಿಶ್ರಮ ಮತ್ತು ಶ್ರದ್ಧೆಯಿಂದ ಕಲಿತರೆ ಏನನ್ನು ಬೇಕಾದರೂ ಸಾಧಿಸಬಹುದು ಎಂದರು.
ವಿದ್ಯಾರ್ಥಿಗಳು ಯಾವದಕ್ಕೂ ಎದೆಗುಂದಬಾರದು. ಜೀವನದಲ್ಲಿ ಸೋತು ಗೆಲ್ಲಬೇಕು. ಆಗ ದೊರೆಯುವ ಸಂತೋಷ ನಿಜವಾದುದು. ಆತ್ಮಸ್ಥೈರ್ಯ ಕಳೆದುಕೊಳ್ಳಬಾರದು. ಆತ್ಮಸ್ಥೈರ್ಯದಿಂದ ಇಡೀ ಜಗತ್ತನ್ನೇ ಗೆಲ್ಲಬಹುದು ಎಂದರು. ಪ್ರತಿಯೊಬ್ಬರು ಕನಸು ಕಾಣಬೇಕು. ಇದಕ್ಕೆ ಜಾತಿ, ಧರ್ಮ, ಬಡವ, ಶ್ರೀಮಂತ ಎಂಬ ಬೇಧವಿಲ್ಲ. ಕನಸು ಸಕಾರಾತ್ಮಕ ಭಾವನೆಯನ್ನು ಬೆಳೆಸುತ್ತದೆ ಎಂದರು.
ವಿದ್ಯಾರ್ಥಿನಿಯರು ಪದವಿ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದ ಅವರು ಪೆÇೀಷಕರು ಹೆಣ್ಣು ಮಕ್ಕಳಿಗೂ ಹೆಚ್ಚಿನ ಶಿಕ್ಷಣ ನೀಡಲು ಮುಂದೆ ಬರಬೇಕು ಎಂದರು. ಪ್ರಾಸ್ತಾವಿಕವಾಗಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲೆ ಡೈನಾ ಸೋಮಯ್ಯ ನಮ್ಮ ವಿದ್ಯಾಸಂಸ್ಥೆಯಲ್ಲಿ ಶಿಕ್ಷಣದ ಗುಣಮಟ್ಟ ಉತ್ತಮವಾಗಿದೆ. ಉತ್ತಮ ಬೋಧಕ ವರ್ಗದವರಿದ್ದಾರೆ. ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ನಮ್ಮ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ ಎಂದರು.
ಈ ಸಂದರ್ಭ ಮಂಗಳೂರಿನ ಸಮಾಜ ಸೇವಕ ರಫೀಕ್ ಮಾಸ್ಟರ್ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಆಡಳಿತ ಮಂಡಳಿ ಸದಸ್ಯ ಮೆಹಬೂಬ್ ಸಾಬ್ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಪಠ್ಯ ಮತ್ತು ಪಠ್ಯೇತರ ಚಟುವಟಿಕೆ ಸ್ವರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಉಪನ್ಯಾಸಕ ವೃಂದ, ಪೆÇೀಷಕರು ಇದ್ದರು.