ಮಡಿಕೇರಿ, ಡಿ. 17 : ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಇವರ ಸಂಯುಕ್ತ, ಆಶ್ರಯದಲ್ಲಿ ಮಹಿಳಾ ಸಹಕಾರ ಸಂಘಗಳ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು ಮತ್ತು ಕಾರ್ಯದರ್ಶಿ ಹಾಗೂ ಸ್ವ ಸಹಾಯ ಗುಂಪುಗಳ ಸದಸ್ಯರಿಗೆ ಸಹಕಾರ ಸಂಘಗಳ ಅಭಿವೃದ್ಧಿ ಕುರಿತು ಶಿಕ್ಷಣ ಕಾರ್ಯಕ್ರಮವು ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸುಂಟಿಕೊಪ್ಪ ಶ್ರೇಷ್ಠ ಮಹಿಳಾ ಸಹಕಾರಿ ಪ್ರಶಸ್ತಿ ಪುರಸ್ಕøತರಾದ ಲೀಲಾ ಮೇದಪ್ಪ ಮಹಿಳೆಯರು ಸಹಕಾರಿ ಸಂಸ್ಥೆಯ ಸವಲತ್ತುಗಳು ಮತ್ತು ಸೌಲಭ್ಯಗಳನ್ನು ಬಳಸಿಕೊಂಡು ಸ್ವಾವಲಂಬಿ ಬದುಕು ಕಟ್ಟಿಕೊಳ್ಳುವಂತೆ ಕರೆ ನೀಡಿದರು.

ಸಹಕಾರ ಕ್ಷೇತ್ರದಲ್ಲಿ ಮಹಿಳೆ ಯರ ಪಾತ್ರ ಹಾಗೂ ಸಹಕಾರ ಸಂಘಗಳಲ್ಲಿ ಹೇಗೆ ಕಾರ್ಯನಿರ್ವಹಿಸಬೇಕು ಮತ್ತು ಸಹಕಾರ ಸಂಘಗಳನ್ನು ಅಭಿವೃದ್ಧಿ ಪಡಿಸಲು ಹೇಗೆ ಸಾಧ್ಯ ಎಂಬದರ ಬಗ್ಗೆ ಸವಿಸ್ತಾರವಾದ ಮಾಹಿತಿ ಪಡೆದುಕೊಂಡು ಸಂಘ ಸಂಸ್ಥೆಗಳನ್ನು ಅಭಿವೃದ್ಧಿಪಡಿಸಬೇಕು ಎಂದರು. ವಕೀಲರಾದ ಬಿ.ಎಂ. ಲವಕುಮಾರ್ ಅವರು ಮಹಿಳಾ ದೌರ್ಜನ್ಯ, ಕಾನೂನು, ಹಕ್ಕುಗಳ ಮತ್ತು ಸಂಘಗಳ ಅಭಿವೃದ್ಧಿ ಕುರಿತು ಉಪನ್ಯಾಸ ನೀಡಿದರು.

ಜಿಲ್ಲಾ ಸಹಕಾರ ಯೂನಿ ಯನ್‍ನ ನಿರ್ದೇಶಕರಾದ ಎಚ್.ಎನ್. ರಾಮಚಂದ್ರ, ಎನ್.ಎ. ರವಿ ಬಸಪ್ಪ, ಪಿ.ಸಿ.ಮನು ರಾಮಚಂದ್ರ ಮತ್ತಿತರರು ಪಾಲ್ಗೊಂಡಿದ್ದರು. ಜಿಲ್ಲಾ ಸಹಕಾರ ಯೂನಿಯನ್‍ನ ಸಿಇಒ ಯೋಗೆಂದ್ರ ನಾಯಕ್ ಸ್ವಾಗತಿಸಿ, ನಿರೂಪಿಸಿದರು. ಮಂಜುಳ ಪ್ರಾರ್ಥಿಸಿ, ವಂದಿಸಿದರು.