ಸೋಮವಾರಪೇಟೆ, ಡಿ. 17: ಸ್ವಾಮಿ ವಿವೇಕಾನಂದ ಜಯಂತ್ಯೋತ್ಸವ ಸಮಿತಿ ಆಶ್ರಯದಲ್ಲಿ ಜನವರಿ 11 ರಂದು ಸೋಮವಾರಪೇಟೆಯಲ್ಲಿ ವಿವೇಕಾನಂದ ಜಯಂತಿಯನ್ನು ಆಚರಿಸಲು ತೀರ್ಮಾನಿಸಲಾಯಿತು.

ಸಮಿತಿಯ ಗೌರವಾಧ್ಯಕ್ಷರೂ ಆಗಿರುವ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರ ಉಪಸ್ಥಿತಿಯಲ್ಲಿ, ಇಲ್ಲಿನ ಅಲೋಕ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಕಾರ್ಯಕ್ರಮದ ಬಗ್ಗೆ ಚರ್ಚಿಸಲಾಯಿತು.

ವಿವೇಕಾನಂದ ಜಯಂತಿ ಅಂಗವಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸುವದು, ಜ. 11 ರಂದು ಪಟ್ಟಣದಲ್ಲಿ ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಮೆರವಣಿಗೆ, ಸಭಾ ಕಾರ್ಯಕ್ರಮ ನಡೆಸುವಂತೆ ತೀರ್ಮಾನಿಸಲಾಯಿತು.

ಸಭೆಯಲ್ಲಿ ಕಲ್ಲುಮಠದ ಮಠಾಧೀಶರಾದ ಮಹಾಂತ ಸ್ವಾಮೀಜಿ, ಸಮಿತಿಯ ಅಧ್ಯಕ್ಷ ಬಿ.ಎಸ್. ಸದಾನಂದ್, ಕಾರ್ಯದರ್ಶಿ ಎಸ್. ಮಹೇಶ್, ಖಜಾಂಚಿ ಮೃತ್ಯುಂಜಯ, ರೋಟರಿ ಸಂಸ್ಥೆಯ ಅಧ್ಯಕ್ಷ ರಮೇಶ್ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.