ಕುಶಾಲನಗರ, ಡಿ. 17: ವಿದ್ಯಾರ್ಥಿಗಳಿಗೆ ಆರೋಗ್ಯ ಶಿಕ್ಷಣ ಬಗ್ಗೆ ಸಮರ್ಪಕ ಮಾಹಿತಿ ನೀಡಬೇಕಾಗಿದೆ ಎಂದು ಡಿವೈಎಸ್ಪಿ. ಪಿ.ಕೆ. ಮುರಳೀಧರ್ ಅಭಿಪ್ರಾಯ ವ್ಯಕ್ತಪಡಿಸಿದರು.
ಕುಶಾಲನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಆಶ್ರಯದಲ್ಲಿ ನಡೆದ ಫಿಟ್ ಇಂಡಿಯಾ ಸ್ಕೂಲ್ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ತಾಂತ್ರಿಕತೆ, ವೈಜ್ಞಾನಿಕತೆ ಅಭಿವೃದ್ಧಿ ಹೊಂದಿದಂತೆ ವಿದ್ಯಾರ್ಥಿಗಳ ಬುದ್ದಿಮತ್ತೆ ಕ್ಷೀಣಗೊಳ್ಳು ತ್ತಿದ್ದು ಈ ನಿಟ್ಟಿನಲ್ಲಿ ಆರೋಗ್ಯ ಶಿಕ್ಷಣದ ಬಗ್ಗೆ ಸಮರ್ಪಕವಾಗಿ ಮಾಹಿತಿ ನೀಡಬೇಕಿದೆ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ದೈಹಿಕ ಶಿಕ್ಷಣ ಶಿಕ್ಷಕ ಡಾ. ಸದಾಶಿವಯ್ಯ ಎಸ್ ಪಲ್ಲೇದ್, ಫಿಟ್ ಇಂಡಿಯಾ ಸ್ಕೂಲ್ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು. ವಿದ್ಯಾರ್ಥಿಗಳು ದೈಹಿಕ ಶ್ರಮದ ಚಟುವಟಿಕೆಗಳನ್ನು ಕಡಿಮೆ ಮಾಡಿದ ಪರಿಣಾಮ, ಅನೇಕ ರೋಗಗಳಿಗೆ ತುತ್ತಾಗುತ್ತಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಸಣ್ಣ ಮಕ್ಕಳಿಗೆ ಮಧುಮೇಹ ಮತ್ತು ರಕ್ತದೊತ್ತಡ ಇರುವುದನ್ನು ವೈದ್ಯಕೀಯ ವರದಿಗಳು ತಿಳಿಸಿವೆ. ಮಧ್ಯಮ ವಯಸ್ಕರಿಗೆ ದೇಹದ ತೂಕದಲ್ಲಿ ವ್ಯತ್ಯಾಸಗಳ ಆಗುತ್ತಿರುವುದು ಅನಾರೋಗ್ಯದ ಲಕ್ಷಣಗಳಾಗಿವೆ. ಪ್ರತಿಯೊಬ್ಬರೂ ತಮ್ಮ ದೇಹ ಅದಕ್ಕೆ ಸಮಾನವಾದ, ಪೂರಕವಾದ ತೂಕ ಮತ್ತು ಸ್ಥಿತಿ-ಗತಿಗಳು ಹೊಂದಿದಲ್ಲಿ ಉತ್ತಮ ಆರೋಗ್ಯ ಪಡೆಯಬಹುದು ಎಂದರು.
ಯೋಗ ಗುರು ಮಧುಸೂದನ್ ವಿದ್ಯಾರ್ಥಿಗಳಿಗೆ ಯೋಗಾಸನಗಳನ್ನು ಪ್ರದರ್ಶಿಸುವ ಮೂಲಕ ಉತ್ತಮ ದೈಹಿಕ ವ್ಯವಸ್ಥೆಗೆ ಯೋಗದ ಮಹತ್ವವನ್ನು ತಿಳಿಸಿದರು.
ಹೆಲ್ತ್ ಕೇರ್ ಶಿಕ್ಷಕರಾದ ವಿದ್ಯಾಧರ್ ದೈಹಿಕ-ಮಾನಸಿಕ ಆರೋಗ್ಯದ ಮಹತ್ವ ಮತ್ತು ಪೆÇೀಷÀಕಾಂಶದ ಬಗ್ಗೆ ಮಾಹಿತಿಯನ್ನು ನೀಡಿದರು.
ಸಂಸ್ಥೆಯ ಉಪ ಪ್ರಾಂಶುಪಾಲೆ ಸಾವಿತ್ರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಶಿಕ್ಷಕರಾದ ಮಂಜುನಾಥ್, ಮಹೇಂದ್ರ, ದಿನೇಶ್, ಉಮಾ ಮತ್ತಿತರರು ಇದ್ದರು.
ರಾಷ್ಟ್ರೀಯ ಸೇವಾ ಯೋಜನೆ ಹಾಗೂ ವಿದ್ಯಾರ್ಥಿ ಪೆÇಲೀಸ್ ಕೆಡೆಟ್ಗಳು ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.