ಮಡಿಕೇರಿ, ಡಿ. 18: ಜಿಲ್ಲೆಯಲ್ಲಿ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯಡಿ ಆರೋಗ್ಯ ಕಾರ್ಡ್ ವಿತರಿಸಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಪೂಜಿ ಕೇಂದ್ರಗಳ ಗಣಕ ಯಂತ್ರ ನಿರ್ವಾಹಕರಿಗೆ ಹಾಗೂ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ತರಬೇತಿಯನ್ನು ಆಯೋಜಿಸಿದ್ದು, ತಾ. 19 ರಂದು ಬೆಳಿಗ್ಗೆ 11 ಗಂಟೆಗೆ ವೀರಾಜಪೇಟೆ ತಾಲೂಕಿನ ಪೊನ್ನಂಪೇಟೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾ. 21 ರಂದು ಬೆಳಿಗ್ಗೆ 11 ಗಂಟೆಗೆ ಸೋಮವಾರಪೇಟೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತರಬೇತಿ ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ. ಮೋಹನ್ ತಿಳಿಸಿದ್ದಾರೆ.