ಮಡಿಕೇರಿ, ಡಿ. 18: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಸಮಗ್ರ ಮಕ್ಕಳ ರಕ್ಷಣಾ ಸೊಸೈಟಿ ಬೆಂಗಳೂರು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ತಾ. 19 ರಂದು (ಇಂದು) ಬೆಳಿಗ್ಗೆ 11 ಗಂಟೆಗೆ ಸರ್ಕಾರಿ ಬಾಲಕರ ಬಾಲಮಂದಿರದಲ್ಲಿ ಮಕ್ಕಳ ದಿನಾಚರಣೆ ನಡೆಯಲಿದೆ.

ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ ಪೆನ್ನೇಕರ್, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಎ.ಎಂ.ಸೂರಜ್, ಬಾಲ ನ್ಯಾಯ ಮಂಡಳಿ ಅಧ್ಯಕ್ಷರು ಹಾಗೂ ಮುಖ್ಯ ನ್ಯಾಯಿಕ ದಂಡಾಧಿಕಾರಿ ವಿಜಯ ಕುಮಾರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಬಿ.ಡಿ. ರವೀಂದ್ರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಟಿ.ಎಸ್. ಅರುಂಧತಿ ಇತರರು ಪಾಲ್ಗೊಳ್ಳಲಿದ್ದಾರೆ.