ಸಿದ್ದಾಪುರ, ಡಿ. 18: ನೆಲ್ಯಹುದಿಕೇರಿ, ವಾಲ್ನೂರು, ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಗ್ರಾಮಗಳ ವಿವಿಧ ರಸ್ತೆಗಳ ಒಟ್ಟು 3.80 ಕೋಟಿ ವೆಚ್ಚದ ಕಾಮಗಾರಿಗಳಿಗೆ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಭೂಮಿ ಪೂಜೆಯನ್ನು ನೆರವೇರಿಸಿದರು. ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಬೆಟ್ಟದಕಾಡು ಶ್ರೀ ಸತ್ಯನಾರಾಯಣ ದೇವಾಲಯಕ್ಕೆ ತೆರಳುವ ರಸ್ತೆ ಹಾಗೂ ಬೆಟ್ಟದಕಾಡು ಭಾಗದ ಕೆಲವು ರಸ್ತೆಗಳಿಗೆ ಹಾಗೂ ಪರಿಶಿಷ್ಟ ವರ್ಗಕ್ಕೆ ಸೇರಿದ ಅನುದಾನದಿಂದ ಹಾಗೂ ವಿಶೇಷ ಅನುದಾನದಿಂದ ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆಯನ್ನು ನೆರವೇರಿಸಿದರು.
ಈ ಸಂದರ್ಭ ವಾಲ್ನೂರು ಗ್ರಾ.ಪಂ. ಅಧ್ಯಕ್ಷೆ ನಾಗರತ್ನಮ್ಮ, ನೆಲ್ಯಹುದಿಕೇರಿ ಗ್ರಾ.ಪಂ. ಉಪಾಧ್ಯಕ್ಷೆ ಸೆಫಿಯಾ ಹಾಗೂ ನೆಲ್ಯಹುದಿಕೇರಿ ಹಾಗೂ ವಾಲ್ನೂರು, ನಂಜರಾಯಪಟ್ಟಣ ಗ್ರಾ.ಪಂ. ಸದಸ್ಯರುಗಳು, ಪಿ.ಡಿ.ಓ. ಅನಿಲ್ ಕುಮಾರ್, ಬಿ.ಜೆ.ಪಿ. ಪ್ರಮುಖ ಪಾಲಚಂಡ ಅಚ್ಚಯ್ಯ, ಹಾಗೂ ಸ್ಥಳೀಯ ಬಿ.ಜೆ.ಪಿ. ಪಕ್ಷದ ಪದಾಧಿಕಾರಿಗಳು ಹಾಜರಿದ್ದರು.
-ವಾಸು