ಮಡಿಕೇರಿ, ಡಿ. 18: ತಾಳತ್ತಮನೆ ಶ್ರೀ ದುರ್ಗಾ ಭಗವತಿ ದೇವಸ್ಥಾನಕ್ಕೆ ಹೋಗುವ ಕಾಂಕ್ರೀಟ್ ರಸ್ತೆಯನ್ನು ವೀರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಉದ್ಘಾಟಿಸಿದರು.

ಜಿಲ್ಲಾ ಪಂಚಾಯಿತಿ ಅನುದಾನದಲ್ಲಿ ಆದ ರಸ್ತೆ ಇದಾಗಿದ್ದು, ಜಿಲ್ಲಾ ಪಂಚಾಯಿತಿ ಸದಸ್ಯೆ ಯಾಲದಾಳು ಪದ್ಮಾವತಿ, ತಾಲೂಕು ಪಂಚಾಯಿತಿ ಸದಸ್ಯ ಕೊಡಪಾಲು ಗಣಪತಿ, ಗ್ರಾಮ ಪಂಚಾಯಿತಿ ಸದಸ್ಯರಾದ ಪೊನ್ನೇಟಿ ನಿತ್ಯಕುಮಾರಿ, ಗಿರೀಶ್ ತಾಳತ್ತಮನೆ, ಮದೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಮುದ್ದೇನ ಚಂದ್ರಶೇಖರ್, ಉಪಾಧ್ಯಕ್ಷೆ ರತ್ನಾವತಿ, ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು, ಗ್ರಾಮಸ್ಥರು ಹಾಜರಿದ್ದರು.