ವೀರಾಜಪೇಟೆ, ಡಿ.18: ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಹಾಗೂ ಸಂಘಟಿಸುವ ನಿಟ್ಟಿನಲ್ಲಿ ವೀರಾಜಪೇಟೆ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಪಟ್ಟಡ ಎ.ರಂಜಿ ಪೂಣಚ್ಚ ಅವರನ್ನು ಕೆಪಿಸಿಸಿ ಸೂಚನೆ ಮೇರೆಗೆ ಜಿಲ್ಲಾಧ್ಯಕ್ಷ ಕೆ.ಕೆ. ಮಂಜುನಾಥ್ ಕುಮಾರ್ ಆಯ್ಕೆ ಮಾಡಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆದಿದೆ. ಪಕ್ಷದಿಂದ ನೀಡಿರುವ ಜವಾಬ್ದಾರಿಯನ್ನು ತಕ್ಷಣದಿಂದಲೇ ಕಾರ್ಯನಿರ್ವಹಿಸುವಂತೆ ಆದೇಶಿಸಲಾಗಿದೆ.