ಮಡಿಕೇರಿ, ಡಿ. 18: ಆಫೀಸರ್ಸ್ ಕ್ಲಬ್, ಬ್ಲಾಸಂ ಆಂಗ್ಲ ಮಾಧ್ಯಮ ಸಂಯುಕ್ತ ಪ್ರೌಢಶಾಲೆ ವತಿಯಿಂದ ತಾ. 20 ರಂದು ಸಂಜೆ 4 ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಶಾಲಾ ವಾರ್ಷಿಕೋತ್ಸವ ನಡೆಯಲಿದೆ.

ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿ.ಪಂ. ಸಿಇಒ ಕೆ. ಲಕ್ಷ್ಮೀಪ್ರಿಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪಿ., ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪಿ.ಎಸ್. ಮಚ್ಚಾಡೋ, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್. ಗಾಯತ್ರಿ ಇತರರು ಪಾಲ್ಗೊಳ್ಳಲಿದ್ದಾರೆ.