ಸೋಮವಾರಪೇಟೆ,ಡಿ.18: ತಾಲೂಕು ಒಕ್ಕಲಿಗರ ಸಂಘದ ವಿಶ್ವಮಾನವ ಕುವೆಂಪು ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಾರ್ಷಿಕೋತ್ಸವ ತಾ.21ರಂದು ಅಪರಾಹ್ನ 1.30ಕ್ಕೆ ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಮುಖ್ಯಶಿಕ್ಷಕಿ ಮಿಲ್‍ಡ್ರೆಡ್ ಗೊನ್ಸಾಲ್ವೆಸ್ ತಿಳಿಸಿದ್ದಾರೆ.

ಸಂಘದ ಅಧ್ಯಕ್ಷ ಎ.ಆರ್.ಮುತ್ತಣ್ಣ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪಿ.ಎಸ್.ಮಚ್ಚಾಡೋ, ಶಕ್ತಿ ಪತ್ರಿಕೆಯ ಪ್ರಧಾನ ಸಂಪಾದಕ ಜಿ.ರಾಜೇಂದ್ರ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.