ನಾಪೋಕ್ಲು, ಡಿ. 19: ಬೇತು ಗ್ರಾಮದ ಮಕ್ಕಿ ಶಾಸ್ತಾವು ದೇವರ ವಾರ್ಷಿಕ ಉತ್ಸವ ವಿಜೃಂಭಣೆಯಿಂದ ನೆರವೇರಿತು. ದೇವಾಲಯದ ಆವರಣದಲ್ಲಿ ನಡೆದ ಎರಡು ತೆರೆಗಳೊಂದಿಗೆ ಉತ್ಸವ ಕೊನೆಗೊಂಡಿತು. ಬೆಳಿಗ್ಗೆ ಅಜ್ಜಪ್ಪ ಕೋಲ ಹಾಗೂ ಮಧ್ಯಾಹ್ನ ವಿಷ್ಣುಮೂರ್ತಿ ತೆರೆಗಳು ಗಮನ ಸೆಳೆದವು. ಭಕ್ತರಿಂದ ದೇವರಿಗೆ ವಿವಿಧ ರೀತಿಯ ಹರಕೆಗಳನ್ನು ಸಲ್ಲಿಸಲಾಯಿತು. ಮಧ್ಯಾಹ್ನ ಅನ್ನದಾನ ನಡೆಯಿತು. ವಿಷ್ಣುಮೂರ್ತಿ ತೆರೆ ಮೇಲೇರಿಗೆ ಬೀಳುವ ದೃಶ್ಯ ಭಕ್ತರನ್ನು ರೋಮಾಂಚನಗೊಳಿಸಿತು.