ಕೂಡಿಗೆ, ಡಿ. 19: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಇರುವಂತೆ ಕೊಡಗು ಜಿಲ್ಲೆಯಲ್ಲಿಯು ಮಿನಿ ವಿಮಾನ ನಿಲ್ದಾಣ ಪ್ರಾರಂಭಿಸುವ ನಿಟ್ಟಿನಲ್ಲಿ ವಿಮಾನ ಇಲಾಖೆಯ ಅಧಿಕಾರಿಗಳ ತಂಡ ಜೆಲ್ಲೆಯ ಕೆಲವು ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿನೆ ನಡೆಸಿತ್ತು. ಅದರಂತೆ ಕುಶಾಲನಗರ ಸಮೀಪದ ಕೂಡಿಗೆ ಕೃಷಿ ಕ್ಷೇತ್ರದ ಜಾಗವನ್ನು ಮೂರು ಬಾರಿ ವೀಕ್ಷಣೆ ಮಾಡಲಾಗಿತ್ತು. ಇದೀಗ ಕೂಡಿಗೆ ಕೃಷಿ ಕ್ಷೇತ್ರದ ಜಾಗದಲ್ಲಿ ಮಿನಿ ವಿಮಾನ ನಿಲ್ದಾಣ ಪ್ರಾರಂಭಿಸಲು ಒಪ್ಪಿಗೆಯ ಅನುಮತಿ ದೊರೆತಿದೆ ಎಂದು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ತಿಳಿಸಿದ್ದಾರೆ.
ಮುಂದಿನ ದಿನಗಳಲ್ಲಿ ಸಂಬಂಧಪಟ್ಟ ಇಲಾಖೆಯ ಇಂಜಿನಿಯರ್ ಮೂಲಕ ಸರ್ವೆ ಕಾರ್ಯ ನಡೆಸಿ ನಂತರ ಮುಂದಿನ ಆರು ತಿಂಗಳುಗಳಲ್ಲಿ ಕಾಮಗಾರಿ ಆರಂಭಿಸಲು ಚಿಂತನೆ ನೆಡಸಲಾಗುತ್ತಿದೆ. ಅಲ್ಲದೆ ವಿಧಾನ ಸಭಾ ಆಧಿವೇಶನದಲ್ಲಿ ಚರ್ಚಿಸಿ ಹೆಚ್ಚು ಅನುದಾನ ಬಿಡುಗಡೆಗೆ ಪ್ರಯತ್ನಿಸಲಾಗುವುದೆಂದು ತಿಳಿಸಿದ್ದಾರೆ.