ಆಯುರ್ವೇದದ ಪ್ರಕಾರ ಮುಂಜಾನೆಯ ನಸುಕಿನ 3:00 ರಿಂದ 6:00 ರವರೆಗಿನ ಸಮಯ. ನಮ್ಮ ಪ್ರಾಚೀನ ಋಷಿಮುನಿಗಳು ಈ ಸಮಯಕ್ಕೆ ವಿಶೇಷವಾದಂತಹ ಸ್ಥಾನಮಾನವನ್ನು ನೀಡಿದ್ದಾರೆ. ಈ ಸಮಯದಲ್ಲಿ ಧ್ಯಾನ, ಯೋಗ, ಜಪ, ಪೂಜೆ ಮುಂತಾದ ಸತ್ಕರ್ಮ ಗಳನ್ನಾಚರಿಸಿದರೆ ಹೆಚ್ಚು ಫಲಪ್ರದ.

v ಪ್ರತಿನಿತ್ಯ ಬ್ರಹ್ಮಮುಹೂರ್ತದಲ್ಲಿ ಎದ್ದೇಳುವುದರಿಂದ ಶರೀರದ ಸೌಂದರ್ಯ, ಬಲ, ವಿದ್ಯೆ, ಬುದ್ಧಿ ಹಾಗೂ ಆರೋಗ್ಯ ವೃದ್ಧಿಸುತ್ತವೆ. ಈ ಸಮಯದಲ್ಲಿ ನಿದ್ರಿಸುವುದು ಶಾಸ್ತ್ರ ನಿಷಿದ್ಧ.

v ವೈಜ್ಞಾನಿಕ ದೃಷ್ಟಿಯಿಂದಲೂ ಬ್ರಹ್ಮ ಮುಹೂರ್ತಕ್ಕೆ ವಿಶೇಷವಾದ ಮಹತ್ವವಿದೆ.

v ಈ ಸಮಯದಲ್ಲಿ ವಾಯುಮಂಡಲ ಮಾಲಿನ್ಯ ದಿಂದ ವಿಮುಕ್ತವಾಗಿರುತ್ತದೆ. ಆಮ್ಲಜನಕದ ಪ್ರಮಾಣ ಶೇಕಡ 41ರಷ್ಟಿರುತ್ತದೆ. ಇದರಿಂದ ನಮ್ಮ ಶ್ವಾಸಕೋಶಗಳು ಶುದ್ಧಿಯಾಗುತ್ತವೆ. ಶುದ್ಧವಾಯು ವಿನಿಂದ ಮನಸ್ಸು ಹಾಗೂ ಬುದ್ಧಿ ಆರೋಗ್ಯ ವಾಗಿರುತ್ತದೆ.

v ಯಾರು ಬ್ರಹ್ಮ ಮುಹೂರ್ತದಲ್ಲೆದ್ದು ನಡೆಯು ತ್ತಾರೋ ಅವರ ಶರೀರದಲ್ಲಿ ಸಂಜೀವಿನೀ ಶಕ್ತಿಯ ಸಂಚಾರವಾಗುತ್ತದೆಂದು ಆಯುರ್ವೇದ ತಿಳಿಸು ತ್ತದೆ.

v ಈ ಸಮಯದಲ್ಲಿ ಬೀಸುವ ಗಾಳಿಗೆ ಅಮೃತ ದಂತಹ ಶಕ್ತಿಯಿರುತ್ತದೆ. ರಾತ್ರಿಯ ವಿಶ್ರಾಂತಿಯ ನಂತರ ಶರೀರ ಹಾಗೂ ಬುದ್ಧಿ ಉಲ್ಲಸಿತವಾಗಿರು ತ್ತದೆ.

v ಬ್ರಾಹ್ಮೀ ಮುಹೂರ್ತದಲ್ಲಿ ಅಧ್ಯಯನ ಮಾಡಿದರೆ ಸುಲಭವಾಗಿ ಮನವರಿಕೆಯಾಗುತ್ತದೆ.

v ಅಧ್ಯಯನ ಮಾಡಲು ಬ್ರಹ್ಮಮುಹೂರ್ತವೇ ಪ್ರಶಸ್ತ. ಪ್ರಮುಖ ಮಂದಿರಗಳ ಮುಖ್ಯದ್ವಾರ ತೆರೆಯುವುದು ಬ್ರಹ್ಮ ಮುಹೂರ್ತದ ಸಮಯದಲ್ಲೇ. ದೇವರ ಶೃಂಗಾರ ಹಾಗೂ ಪೂಜೆಗಳನ್ನು ಬ್ರಹ್ಮ ಮುಹೂರ್ತದಲ್ಲಿ ನಡೆಸಲಾಗುತ್ತದೆ.

v ಬ್ರಹ್ಮ ಮುಹೂರ್ತದಲ್ಲಿ ಭಗವಂತನ ಪೂಜೆ, ಧ್ಯಾನ ಹಾಗೂ ಪವಿತ್ರಕಾರ್ಯಗಳನ್ನು ಮಾಡುವುದರಿಂದ ಆತ್ಮ ಶಕ್ತಿ ಪ್ರಾಪ್ತಿಯಾಗುತ್ತದೆ.

v ಮನುಷ್ಯನ ಜ್ಞಾನ, ವಿವೇಕ, ಶಾಂತಿ, ಸುಖ ಮುಂತಾದ ಸದ್ಗುಣಗಳ ವೃದ್ಧಿಯಾಗುತ್ತದೆ.

v ಭಗವಂತನ ಸ್ಮರಣೆಯ ನಂತರ ಮೊಸರು, ತುಪ್ಪ, ಕನ್ನಡಿ, ಬಿಲ್ವಪತ್ರೆ, ಹೂವಿನ ಮಾಲೆ ಮುಂತಾದ ಪವಿತ್ರ ವಸ್ತುಗಳನ್ನು ನೋಡುವುದರಿಂದ ದಿನ ಶುಭವಾಗಿರುತ್ತದೆ.

v ಸೀತೆಯನ್ನು ಹುಡುಕುತ್ತಾ ಸಾಗಿದ ಆಂಜನೇಯ ಬ್ರಹ್ಮ ಮುಹೂರ್ತದಂದೇ ಅಶೋಕವನ ತಲುಪಿದ್ದ. ಅಲ್ಲಿ ವೇದ ಮಂತ್ರಗಳ ಉಚ್ಛಾರಣೆಯನ್ನು ಕೇಳಿದ್ದ, ಮತ್ತು ಯಜ್ಞಾದಿ ಕಾರ್ಯಗಳನ್ನು ನೋಡಿದ್ದನೆಂದು ವಾಲ್ಮೀಕಿ ರಾಮಾಯಣದಲ್ಲಿ ತಿಳಿಸಲಾಗಿದೆ.

v ರಾತ್ರಿಯ ವಿಶ್ರಾಂತಿಯ ನಂತರ ಮನಸ್ಸು ಶಾಂತ ಹಾಗೂ ಸ್ಥಿರವಾಗಿರುತ್ತದೆ. ವಾತಾವರಣದಲ್ಲಿ ಶುದ್ಧತೆಯೂ ಹೆಚ್ಚಿರುತ್ತದೆ. ಆಗ ದೇವರ ಉಪಾಸನೆ, ಧ್ಯಾನ, ಯೋಗ, ಪೂಜೆಗಳನ್ನು ಮಾಡುವುದರಿಂದ ಮನಸ್ಸು ಹಾಗೂ ಬುದ್ಧಿ ಆರೋಗ್ಯದಿಂದ ಕೂಡಿರುತ್ತವೆ.

v ಆಲಸ್ಯವನ್ನು ಬಿಟ್ಟು ಬ್ರಹ್ಮ ಮುಹೂರ್ತದಲ್ಲೆದ್ದು ಪುಣ್ಯ ಕರ್ಮಗಳನ್ನು ಮಾಡಿದರೆ ಶ್ರೇಯಸ್ಸು ಸಿಗುವುದರಲ್ಲಿ ಯಾವುದೇ ಅನುಮಾನವಿಲ್ಲ.

‘ಲೋಕಾಃ ಸಮಸ್ತಾಃ ಸುಖಿನೋ ಭವಂತು’

(ಆಧಾರ)

ಉಳ್ಳಿಯಡ ಡಾಟಿ ಪೂವಯ್ಯ