ಒಡೆಯನಪುರ, ಡಿ. 19: ಸಮೀಪದ ಶನಿವಾರಸಂತೆ ಸುಪ್ರಜ ಗುರುಕುಲ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳ ವಿಜ್ಞಾನ ವಸ್ತುಪ್ರದರ್ಶನ ಕಾರ್ಯಕ್ರಮ ನಡೆಯಿತು. ಶಾಲೆಯ 5 ರಿಂದ 9ನೇ ತರಗತಿ ವಿದ್ಯಾರ್ಥಿಗಳು ಆವಿಷ್ಕರಿಸಿದ ವಿವಿಧ ಕೃತಕ ವೈಜ್ಞಾನೋಪಕರಣಗಳನ್ನು ವಿದ್ಯಾಸಂಸ್ಥೆ ಆವರಣದಲ್ಲಿ ಪ್ರದರ್ಶನ ಕ್ಕಿಡಲಾಗಿತು. ಸುಪ್ರಜ ಗುರುಕುಲ ವಿದ್ಯಾಸಂಸ್ಥೆ ಕಾರ್ಯದರ್ಶಿ ಎನ್.ಟಿ. ಗುರುಪ್ರಸಾದ್ ವಿಜ್ಞಾನ ವಸ್ತುಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಹಂತದಲೇ ವೈಜ್ಞಾನಿಕವಾಗಿ ಚಿಂತಿಸುವ ಮನೋಭಾವನೆ ಬೆಳೆಸಬೇಕೆಂಬ ಉದ್ದೇಶದಿಂದ ಪ್ರತಿವರ್ಷವು ವೈಜ್ಞಾನೋಪಕರಣಗಳ ವಿಜ್ಞಾನ ವಸ್ತುಪ್ರದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು. ಶನಿವಾರಸಂತೆ ಕ್ಲಸ್ಟರ್ ಸಿ.ಆರ್.ಪಿ ಜಾನ್‍ಪಾಲ್ ಡಿಸೋಜ ಮಾತನಾಡಿದರು. ಕಾರ್ಯಕ್ರಮದಲ್ಲಿ ಸುಪ್ರಜ ಗುರುಕುಲ ವಿದ್ಯಾಸಂಸ್ಥೆ ಮ್ಯಾನೆಜಿಂಗ್ ಟ್ರಸ್ಟಿ ಡಿ.ಸುಜಲಾದೇವಿ, ಪೋಷಕರು, ಮತ್ತು ಸಾರ್ವಜನಿಕರು ಹಾಜರಿದ್ದರು. ಸ್ಪರ್ಧಾ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.