ಮಡಿಕೇರಿ, ಡಿ. 19: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳವು ರಾಜ್ಯದ ಬೆಂಗಳೂರು, ಮೈಸೂರು, ಮಡಿಕೇರಿ, ಮೂಡಬಿದ್ರೆ, ಶಿವಮೊಗ್ಗ, ಧಾರವಾಡ, ಬೆಳಗಾವಿ ಹಾಗೂ ಕಲಬುರಗಿ ಈ ಸ್ಥಳಗಳಲ್ಲಿ ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿ ಸಂಸ್ಥೆಗಳನ್ನು ನಡೆಸುತ್ತಿದೆ. ಈ ತರಬೇತಿ ಸಂಸ್ಥೆಗಳ ಮೂಲಕ ಸಹಕಾರ ಸಂಘ ಸಂಸ್ಥೆ/ಸಹಕಾರ ಇಲಾಖೆ/ಸಹಕಾರ ಲೆಕ್ಕಪರಿಶೋಧನಾ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಹಾಗೂ ಖಾಸಗಿ ಅಭ್ಯರ್ಥಿಗಳಿಗೆ “6 ತಿಂಗಳು/ (180 ದಿನಗಳ”) ಅವಧಿಯ “ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್” ತರಬೇತಿಯನ್ನು ದಿನಾಂಕ: 01.01.2020 ರಿಂದ ಪ್ರಾರಂಭವಾಗುತ್ತದೆ. ಈ ತರಬೇತಿಯನ್ನು ಪಡೆಯಲಿಚ್ಛಿಸುವ ಅರ್ಹ ಅಭ್ಯರ್ಥಿಗಳಿಂದ ದಿನಾಂಕ: 02.11.2019 ರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ತರಬೇತಿಯನ್ನು ಪಡೆಯಲಿಚ್ಛಿಸುವ ಅಭ್ಯರ್ಥಿಗಳು ಸಹಕಾರ ಸಂಘ/ಸಹಕಾರ ಇಲಾಖೆ/ಸಹಕಾರ ಲೆಕ್ಕಪರಿಶೋಧನಾ ಇಲಾಖೆಯಲ್ಲಿ ವೇತನ ಪಡೆಯುವ ನೌಕರರಾಗಿರಬೇಕು. ಖಾಸಗಿ ಅಭ್ಯರ್ಥಿಗಳಿಗೆ ನಿಯಮಿತವಾಗಿ ಅವಕಾಶವನ್ನು ಕಲ್ಪಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಶೇಕಡ 18 ರಷ್ಟು ಸ್ಥಾನಗಳನ್ನು ತರಬೇತಿಗಾಗಿ ಮೀಸಲಿರಿಸಲಾಗಿರಬೇಕು. ಕನಿಷ್ಟ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿ, ಸಹಕಾರ ಸಂಘಗಳಲ್ಲಿ ಒಂದು ವರ್ಷಕ್ಕಿಂತ ಮೇಲ್ಪಟ್ಟು ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯೂ ಸಹ ತರಬೇತಿ ಪಡೆಯಲು ಅರ್ಹರಾಗಿರುತ್ತಾರೆ. ಇಂತಹ ಅಭ್ಯರ್ಥಿಗಳು ಮಾತ್ರ ತರಬೇತಿಗಾಗಿ ಅರ್ಜಿ ಸಲ್ಲಿಸಬಹುದು. ಈ ತರಬೇತಿಯಲ್ಲಿ ಅಭ್ಯರ್ಥಿಗಳಿಗೆ ಮಾಹೆಯಾನ ರೂ.400/-ಗಳ ಶಿಷ್ಯವೇತನವನ್ನು ನೀಡಲಾಗುವುದು.

ನಿರುದ್ಯೋಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ “6 ತಿಂಗಳು/180 ದಿನಗಳ” ವಿಶೇಷ “ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್” ತರಬೇತಿಯನ್ನು ಸಹ ನೀಡಲಾಗುವುದು. ಈ ವರ್ಗಕ್ಕೆ ಸೇರಿದ ಅಭ್ಯರ್ಥಿಗಳ ಪಟ್ಟಿಯನ್ನು ಆಯಾ ಜಿಲ್ಲಾ ಉದ್ಯೋಗ ವಿನಿಮಯ ಕಚೆÉೀರಿಯಿಂದ ತರಿಸಿಕೊಳ್ಳಲಾಗುವುದು ಮತ್ತು ಈ ವರ್ಗದ ಅಭ್ಯರ್ಥಿಗಳು ಆಯಾ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರವರ ಮೂಲಕ ಅಥವಾ ವ್ಯವಸ್ಥಾಪಕ ನಿರ್ದೇಶಕರು, ಮಡಿಕೇರಿ ಹಾಗೂ ಹಾಸನ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಇವರ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಕನಿಷ್ಟ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ವಯೋಮಿತಿ 18 ವರ್ಷಗಳಾಗಿರಬೇಕು. ಗರಿಷ್ಠ 30 ವರ್ಷಗಳು ಮೀರಿರಬಾರದು. ಈ ಅಭ್ಯರ್ಥಿಗಳಿಗೆ ಮಾಹೆಯಾನ ರೂ.500/- ಶಿಷ್ಯವೇತನವನ್ನು ನೀಡಲಾಗುವುದು.

ಪ್ರಸಕ್ತ ತರಬೇತಿ ಅಧಿವೇಶನವು ದಿನಾಂಕ: 01.01.2020 ರಿಂದ ಪ್ರಾರಂಭವಾಗಲಿರುತ್ತದೆ. ಡಿ.ಸಿ.ಎಂ. ತರಬೇತಿಯ ಅರ್ಜಿ ಫಾರಂ ಮತ್ತು ವಿವರಣಾ ಪುಸ್ತಕವನ್ನು ತರಬೇತಿ ಸಂಸ್ಥೆಯಿಂದ ಪಡೆಯಬಹುದು. ಅರ್ಜಿ ಮತ್ತು ವಿವರಣಾ ಪುಸ್ತಕದ ಶುಲ್ಕ ರೂ.75/- (ರೂ. ಎಪ್ಪತ್ತೈದು ಮಾತ್ರ) ಗಳನ್ನು ನಗದಾಗಿ ಪಾವತಿಸಿ ತರಬೇತಿ ಸಂಸ್ಥೆಯಲ್ಲಿ ಪಡೆಯಬಹುದು. ಅಂಚೆ ಮೂಲಕ ಪಡೆಯಲು ಇಚ್ಛಿಸುವವರು ರೂ.125/- (ರೂ. ಒಂದು ನೂರ ಇಪ್ಪತ್ತೈದು ಮಾತ್ರ)ಗಳ ಡಿ.ಡಿ. ಮೂಲಕ ಪಾವತಿಸಿ ಪಡೆಯಬಹುದಾಗಿದೆ. ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡಿ ಪ್ರಾಂಶುಪಾಲರು, ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್, ಅಬ್ಬಿಪಾಲ್ಸ್ ರಸ್ತೆ, ಮುತ್ತಪ್ಪ ದೇವಸ್ಥಾನದ ಹತ್ತಿರ, ಮಡಿಕೇರಿ ಇದನ್ನು ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ: 08272-228437/ 8762110952/ 9535250704 /9449245024ಯನ್ನು ಸಂಪರ್ಕಿಸಬಹುದು.