ವೀರಾಜಪೇಟೆ, ಡಿ. 19: ವೀರಾಜಪೇಟೆ ಪಟ್ಟಣದ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ಬಿಸಿಎ ವಿದ್ಯಾರ್ಥಿಗಳಿಗಾಗಿ ‘ಸಾಫ್ಟ್ವೇರ್ ಪ್ರಾಜೆಕ್ಟ್ ಮ್ಯಾನೇಜ್ಮೆಂಟ್’ ಎಂಬ ವಿಷಯದ ಬಗ್ಗೆ ವಿಚಾರಗೋಷ್ಠಿ ನಡೆಯಿತು.

ಮಡಿಕೇರಿಯ ಎಫ್.ಎಂ.ಕೆ.ಎಂ.ಸಿ. ಕಾಲೇಜಿನ ಬಿ.ಸಿ.ಎ. ವಿಭಾಗದ ಮುಖ್ಯಸ್ಥ ರವಿಶಂಕರ್ ವಿಚಾರಗೋಷ್ಠಿಯಲ್ಲಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಸಾಫ್ಟ್ವೇರ್ ಪ್ರಾಜೆಕ್ಟ್ ಮ್ಯಾನೇಜ್ಮೆಂಟ್ ಎಂಬ ವಿಷಯದ ಬಗ್ಗೆ ಮಾಹಿತಿ ನೀಡಿ, ವಿದ್ಯಾರ್ಥಿಗಳು ಪ್ರಾಜೆಕ್ಟ್ ಮಾಡುವ ವಿಧಾನ, ಸಾಫ್ಟ್ವೇರ್‍ನ ಬಳಕೆ ಮತ್ತು ಹೊಸ ತಂತ್ರಜ್ಞಾನದ ಬಗ್ಗೆ ವಿವರಿಸಿದರು. ಸಾಫ್ಟ್ವೇರ್‍ನ ಪರಿಕರಗಳ ಬಗ್ಗೆ ಸಂಕ್ಷಿಪ್ತ ಮಾಹಿತಿ ನೀಡಿದರು.

ವಿಚಾರಗೋಷ್ಠಿಯ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ರೆ.ಫಾ. ರೋನಿ ರವಿಕುಮಾರ್ ಮಾತನಾಡಿ, ಆಧುನಿಕ ಕಾಲಘಟ್ಟದಲ್ಲಿ ಸಾಫ್ಟ್ವೇರ್‍ನ ಬಳಕೆಯು ಅತೀ ಪ್ರಮುಖವಾಗಿದ್ದು, ದೇಶದ ಅಭಿವೃದ್ಧಿಗೆ ಪೂರಕವಾಗಿದೆ, ತಂತ್ರಜ್ಞಾನದಿಂದ ಸಮಗ್ರ ರಾಷ್ಟ್ರದ ಪ್ರಗತಿ ಸಾಧ್ಯ ಎಂದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಬಿ.ಸಿ.ಎ. ವಿಭಾಗದ ಮುಖ್ಯಸ್ಥೆ ಸೌಮ್ಯ ಸೋಮರಾಜ್, ಉಪನ್ಯಾಸಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.