ಮಡಿಕೇರಿ, ಡಿ. 20 : -ಬಾಲಭವನ ಸೊಸೈಟಿ, ಕೊಡಗು ಜಿಲ್ಲಾ ಬಾಲಭವನ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ತಾ. 21 ರಂದು (ಇಂದು) ಅಭಿರಂಗ ಮಕ್ಕಳ ನಾಟಕೋತ್ಸವ ನಡೆಯಲಿದೆ. ಬೆಳಗ್ಗೆ 11 ಗಂಟೆಗೆ ನಗರದ ರಾಜಾಸೀಟು ಉದ್ಯಾನವನದಲ್ಲಿ ಮತ್ತು ಮಧ್ಯಾಹ್ನ 3 ಗಂಟೆಗೆ ನಗರದ ಭಾರತೀಯ ವಿದ್ಯಾಭವನ ವೇದಾಂತ ಸಂಘದಲ್ಲಿ ನಾಟಕೋತ್ಸವ ನಡೆಯಲಿದೆ.