ಮಡಿಕೇರಿ, ಡಿ.20: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಪ್ರತಿಭಟಿಸಿದವರ ಮೇಲೆ ಗುರುವಾರ ಮಂಗಳೂರಿನಲ್ಲಿ ಪೊಲೀಸರು ಗೋಲಿಬಾರ್ ಮಾಡಿದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆಯನ್ನು ಖಂಡಿಸಿ ಜಿಲ್ಲೆಯ ಕೆಲವು ಪ್ರದೇಶÀಗಳÀಲ್ಲಿ ಮುಸ್ಲಿಂ ಸಮುದಾಯದ ವರ್ತಕರು ಅಂಗಡಿ, ಮುಂಗಟ್ಟುಗಳನ್ನು ಬೆಳಿಗ್ಗೆಯಿಂದ ಸಂಜೆಯವರೆಗೆ ಮುಚ್ಚಿ ಬಂದ್ ನಡೆಸಿದ್ದಾರೆ. ಸಿದ್ದಾಪುರ ಹಾಗೂ ನೆಲ್ಯಹುದಿಕೇರಿಯಲ್ಲಿ ಬಹುತೇಕ ವರ್ತಕರು ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳನ್ನು ಬೆಳಿಗ್ಗೆಯಿಂದಲೇ ಮುಚ್ಚಿ ಸಂಜೆ 6 ರವರೆಗೆ ಬಂದ್ ಮಾಡಿದರು. ಕೆಲವು ಅಂಗಡಿಗಳು ಮಾತ್ರ ತೆರೆÉದಿದ್ದು, ಸಾರ್ವಜನಿಕರು ಪರದಾಡುವಂತಾಯಿತು. ಅದೇ ರೀತಿ, ನಾಪೋಕ್ಲು, (ಮೊದಲ ಪುಟದಿಂದ) ಸುಂಟಿಕೊಪ್ಪ, ವೀರಾಜಪೇಟೆ ಹಾಗೂ ಪಾಲಿಬೆಟ್ಟಗಳಲ್ಲಿಯೂ ವರ್ತಕರು ಸ್ವಯಂ ಪ್ರೇರಿತವಾಗಿ ಬಂದ್ ಮಾಡಿದರು. ನಾಪೋಕ್ಲುವಿನಲ್ಲಿ ಕಾಲೇಜೊಂದರ ವಿದ್ಯಾರ್ಥಿಗಳು ತರಗತಿಗಳಿಗೆ ಬಹಿಷ್ಕಾರ ಹಾಕಿ ಘೋಷಣೆ ಕೂಗಿದರು. ಸೆ. 144 ನಿರ್ಬಂಧಕಾಜ್ಞೆ ಶುಕ್ರವಾರವೂ ಜಿಲ್ಲೆಯಲ್ಲಿ ಜಾರಿಯಲ್ಲಿದ್ದ ಹಿನ್ನೆಲೆ ಯಾವದೇ ಅಹಿತಕರ ಘಟನೆಗೆ ಆಸ್ಪದವಾಗಲಿಲ್ಲ.ಶುಕ್ರವಾರದ ಪ್ರಾರ್ಥನೆಯ ಬಳಿಕ ಸಿದ್ದಾಪುರ ಮತ್ತು ನೆಲ್ಯಹುದಿಕೇರಿಯ ಮುಸ್ಲಿಂ ಸಂಘಟನೆಗಳ ಒಕ್ಕೂಟದ ವತಿಯಿಂದ ಕಪ್ಪು ಪಟ್ಟಿ ಧರಿಸಿ ಘಟನೆಯನ್ನು ಖಂಡಿಸಲಾಯಿತು.

ಸಂಘಟನೆಯ ಪ್ರಮುಖರಾದ ಕೆ.ಯು ಮಜೀದ್ ಮಾತನಾಡಿ, ಸಂವಿಧಾನ ವಿರೋಧಿ ಎನ್.ಆರ್.ಸಿ ಹಾಗೂ ಸಿ.ಎ.ಎ ಕಾಯ್ದೆಯನ್ನು ಕೇಂದ್ರ ಸರ್ಕಾರ ಕೂಡಲೇ ಹಿಂಪಡೆಯಬೇಕು. ಕಾಯ್ದೆಯ ವಿರುದ್ಧ ಪ್ರತಿಭಟಿಸಿದವರ ಮೇಲೆ ಮಂಗಳೂರಿ ನಲ್ಲಿ ಪೊಲೀಸರು ಗೋಲಿಬಾರ್ ಮಾಡಿ ಇಬ್ಬರು ಅಮಾಯಕರನ್ನು ಕೊಲೆ ಮಾಡಿರುವುದು ಅತ್ಯಂತ ಖಂಡನೀಯ. ಘಟನೆಯ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕೆಂದು ಆಗ್ರಹಿಸಿದರು.

ಪ್ರಮುಖರಾದ ಬಶೀರ್ ಮಾತನಾಡಿ, ಪ್ರಜಾಪ್ರಭುತ್ವ ದೇಶದಲ್ಲಿ ಪ್ರತಿಭಟಿಸುವ ಹಕ್ಕನ್ನು ಪೊಲೀಸರ ಮೂಲಕ ಸರಕಾರದಿಂದÀ ದಮನಿಸ ಲಾಗುತ್ತಿದೆ. ಇದು ಅತ್ಯಂತ ಅಪಾಯ ಕಾರಿ ಬೆಳವಣಿಗೆ ಎಂದ ಅವರು, ರಾಜ್ಯದ ಜನತೆ ಶಾಂತಿ ಕಾಪಾಡ ಬೇಕೆಂದು ಮನವಿ ಮಾಡಿದರು. ಪೊಲೀಸ್ ಗೋಲಿ ಬಾರ್‍ನಲ್ಲಿ ಸಾವನ್ನಪ್ಪಿರುವವರ ಕುಟುಂಬಕ್ಕೆ ಸರಕಾರ ತಲಾ ರೂ. 50 ಲಕ್ಷ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು. ಈ ಸಂದರ್ಭ ವಿವಿಧ ಸಂಘಟನೆಗಳ ಪ್ರಮುಖರಾದ ಶೌಕತ್ ಅಲಿ, ಅಶ್ರಫ್, ಅಸ್ಕರ್, ಶುಕೂರ್, ಬಶೀರ್ ಸೇರಿದಂತೆ ಮತ್ತಿತರರು ಇದ್ದರು.

ನಾಪೆÇೀಕ್ಲು

ನಾಪೆÇೀಕ್ಲು ಪಟ್ಟಣದಲ್ಲಿ ಮುಸ್ಲಿಂ ಸಮುದಾಯದ ಮಂದಿ ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತವಾಗಿ ಮುಚ್ಚುವದರ ಮೂಲಕ ಪ್ರಕರಣವನ್ನು ಖಂಡಿಸಿ ಶಾಂತಿಯುತ ಬಂದ್ ನಡೆಸಿದರು.

ಬಂದ್ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಸಾರ್ವಜನಿಕರ ಸಂಖ್ಯೆ ಕಡಿಮೆ ಯಾಗಿತ್ತು. ಸರಕಾರಿ, ಖಾಸಗಿ ಬಸ್‍ಗಳ ಮತ್ತು ವಾಹನಗಳ ಓಡಾಟ ಎಂದಿನಂತಿತ್ತು. ಯಾವದೇ ಅಹಿತಕರ ಘಟನೆ ನಡೆದ ಬಗ್ಗೆ ವರದಿಯಾಗಿಲ್ಲ. ನಾಪೆÇೀಕ್ಲು ಪೆÇಲೀಸ್ ಠಾಣಾಧಿಕಾರಿ ಆರ್.ಮಂಚಯ್ಯ ಅವರ ನೇತೃತ್ವದಲ್ಲಿ ಬಿಗಿ ಪೆÇಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ತರಗತಿಗೆ ಬಹಿಷ್ಕಾರ

ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪೋಕ್ಲು ಸಮೀಪದ ಹೊದವಾಡ ರಾಫೆಲ್ಸ್ ಇಂಟರ್‍ನ್ಯಾಷನಲ್ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ ಘಟನೆ ವರದಿಯಾಗಿದೆ. ಕಾಲೇಜು ಆವರಣದಲ್ಲಿ ಪೆÇಲೀಸರು ಮತ್ತು ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿದ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಹೊರ ನಡೆದರು. ಆರೋಪಿಸಿದÀ ವಿದ್ಯಾರ್ಥಿಗಳು ಪ್ರಕರಣವನ್ನು ಖಂಡಿಸಿದರು.. ಪೌರತ್ವ ಕಾಯ್ದೆಯನ್ನು ಹಿಂತೆಗೆದು ಕೊಳ್ಳುವಂತೆ ಒತ್ತಾಯಿಸಿದರು.

ಸುಂಟಿಕೊಪ್ಪ

ಸುಂಟಿಕೊಪ್ಪದಲ್ಲಿ ಮುಸ್ಲಿಂ ಸಮುದಾಯದ ವರ್ತಕರು ಬೆಳಿಗ್ಗೆ 11ರಿಂದ ಸಂಜೆ 4.30 ಗಂಟೆಯವರೆಗೆ ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಶಾಲಾ ಕಾಲೇಜುಗಳು, ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸಿದವು. ಸುಂಟಿಕೊಪ್ಪ ಠಾಣಾಧಿಕಾರಿ ತಿಮ್ಮಪ್ಪ ಹಾಗೂ ಸಿಬ್ಬಂದಿ ವರ್ಗ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು.

ಪಾಲಿಬೆಟ್ಟದಲ್ಲಿಯೂ ಮುಸ್ಲಿಂ ಸಮುದಾಯದ ವರ್ತಕರು ಬಂದ್ ನಡೆಸಿದರು.

-(ವರದಿ: ವಾಸು, ಪ್ರಭಾಕರ್, ಕೆ.ಕೆ.ಎಸ್, ರಾಜು ರೈ)