ಸಿದ್ದಾಪುರ, ಡಿ. 20 : ಹುಲಿಯೊಂದು ಎತ್ತುವಿನ ಮೇಲೆ ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ಕರಡಿಗೋಡು ಗ್ರಾಮದಲ್ಲಿ ನಡೆದಿದೆ. ಕರಡಿಗೋಡು ಗ್ರಾಮದ ನಿವಾಸಿ ಕುಕ್ಕುನೂರು ಸುರೇಶ್ ಎಂಬವರಿಗೆ ಸೇರಿದ ಎತ್ತೊಂದರ ಮೇಲೆ ಗುರುವಾರ ರಾತ್ರಿ ದಾಳಿ ನಡೆಸಿ ಹಿಂಭಾಗಕ್ಕೆ ಗಂಭೀರ ಗಾಯವಾಗಿದೆ. ಇತ್ತೀಚಿನ ದಿನಗಳಲ್ಲಿ ಸಿದ್ದಾಪುರದ ಮಾಲ್ದಾರೆ, ಘಟ್ಟದಳ ಭಾಗದಲ್ಲಿ ಹುಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿರುವುದರಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ.