ಮಡಿಕೇರಿ, ಡಿ. 20: ಕೊಡಗು ಗೌಡ ಯುವ ವೇದಿಕೆ ವತಿಯಿಂದ ಗೌಡ ಕುಟುಂಬಗಳ ನಡುವಿನ 21ನೇ ವರ್ಷದ ಕ್ರಿಕೆಟ್ ಪಂದ್ಯಾವಳಿಯನ್ನು 2020ನೇ ಸಾಲಿನ ಏಪ್ರಿಲ್-ಮೇ ತಿಂಗಳಿನಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ವೇದಿಕೆಯ ಕ್ರೀಡಾ ಸಮಿತಿ ಅಧ್ಯಕ್ಷ ಬಾಳಾಡಿ ಮನೋಜ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೌಡ ಕುಟುಂಬಗಳ ನಡುವಿನ ಪಂದ್ಯಾವಳಿಯನ್ನು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಅದ್ದೂರಿಯಾಗಿ ನಡೆಸಲು ತೀರ್ಮಾನಿಸಲಾಗಿದ್ದು, ಈ ಬಾರಿ ಪಂದ್ಯಾವಳಿಯಲ್ಲಿ ಸುಮಾರು 250 ತಂಡ ಗಳು ಭಾಗವಹಿಸುವ ನಿರೀಕ್ಷೆ ಇರುವುದಾಗಿ ಮಾಹಿತಿ ನೀಡಿದರು.
2018ರಲ್ಲಿ ಜಿಲ್ಲೆಯಲ್ಲಿ ನಡೆದ ಪ್ರಾಕೃತಿಕ ವಿಕೋಪದ ಹಿನ್ನೆಲೆ 2019ರಲ್ಲಿ ಸರಳವಾಗಿ ಗೌಡ ಜನಾಂಗ ಬಾಂಧವರ ಕ್ರಿಕೆಟ್ ಪಂದ್ಯಾವಳಿಯನ್ನು ನಡೆಸಲಾಗಿತ್ತೆಂದು ಹೇಳಿದರು. ಪಂದ್ಯಾವಳಿಗೆ ಹೆಸರುಗಳನ್ನು ಕೊಡಗು ಗೌಡ ಯುವ ವೇದಿಕೆ ಕಚೇರಿ ಮತ್ತು ಪರಿಚನ ಸತೀಶ, ಚಿಕನ್ ಪ್ಲಾನೆಟ್, ಚರ್ಚ್ ಕಾಂಪ್ಲೆಕ್ಸ್, ಮಡಿಕೇರಿ ಮೊ. 9448448646 ಇಲ್ಲಿ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಮೊ. 9449361933 ನ್ನು ಸಂಪರ್ಕಿಸಬಹುದು. ಹೆಸರು ನೋಂದಾವಣೆಗೆ ಮಾ. 30 ಕೊನೆಯ ದಿನವಾಗಿದೆಯೆಂದು ತಿಳಿಸಿದರು.
ಗೋಷ್ಠಿಯಲ್ಲಿ ಕೊಡಗು ಗೌಡ ಯುವ ವೇದಿಕೆ ಅಧ್ಯಕ್ಷ ಪೈಕೇರ ಮನೋಹರ್ ಮಾದಪ್ಪ ಹಾಗೂ ಕಾರ್ಯದರ್ಶಿ ರೋಶನ್ ಕಟ್ಟೆಮನೆ ಉಪಸ್ಥಿತರಿದ್ದರು.